News Kannada
Thursday, February 02 2023

ಕ್ಯಾಂಪಸ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರಕ್ತದಾನ ಶಿಬಿರ

Photo Credit : News Kannada

ಉಜಿರೆ:  ಶ್ರೀ ಧ. ಮಂ ಕಾಲೇಜಿನ ಎನ್ಎಸ್ಎಸ್ ಘಟಕದ ನೇತೃತ್ವದಲ್ಲಿ ಯೂಥ್ ರೆಡ್ ಕ್ರಾಸ್ ಘಟಕ, ರೇಂಜರ್ಸ್ & ರೋವರ್ಸ್, ಸಾಮಾಜಿಕ ಜವಾಬ್ದಾರಿಗಳ ಉಪಕ್ರಮಗಳ ಸಮಿತಿ ಆಶ್ರಯದಲ್ಲಿ, ರಕ್ತನಿಧಿ, ಕೆ.ಎಂ.ಸಿ ಆಸ್ಪತ್ರೆ, ಮಂಗಳೂರು ಮತ್ತು ಎಸ್.ಡಿ.ಎಂ. ಆಸ್ಪತ್ರೆ, ಉಜಿರೆ ಸಹಯೋಗದೊಂದಿಗೆ ದಿನಾಂಕ 15-12-2022 ರಂದು ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ರೋಗವಿಜ್ಞಾನ ವಿಭಾಗದ ವ್ಯವಸ್ಥಾಪಕ ನಿರ್ದೇಶಕಿ ಡಾ. ತೇಜಸ್ವಿನಿಯವರು ಮಾತನಾಡಿ,‌ “ರಕ್ತವನ್ನು ಕೃತಕವಾಗಿ ತಯಾರು ಮಾಡಲು ಆಗುವುದಿಲ್ಲ. ಒಂದು ಯೂನಿಟ್ ರಕ್ತದಿಂದ 3 ಜೀವಗಳನ್ನು ಉಳಿಸಬಹುದು. ಆದ್ದರಿಂದಾಗಿ, ರಕ್ತದಾನ ಮಾಡಲು ನಾವು ಜನರನ್ನು ಪ್ರೇರೇಪಿಸಬೇಕು” ಎಂದು ರಕ್ತದಾನದ ಮಹತ್ವವನ್ನು ತಿಳಿಸಿದರು.

ಶಿಬಿರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ರಕ್ತದಾನ ಮಾಡಿದರು. ಶಿಬಿರದಲ್ಲಿ ಒಟ್ಟು 223 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

ಈ ಸಂದರ್ಭ ಎನ್ಎಸ್ಎಸ್ ಯೋಜನಾಧಿಕಾರಿಗಳಾದ ಡಾ. ಲಕ್ಷ್ಮೀನಾರಾಯಣ ಕೆ.ಎಸ್ ಹಾಗೂ ಶ್ರೀಮತಿ ದೀಪ ಆರ್ ಪಿ, ಯೂಥ್ ರೆಡ್ ಕ್ರಾಸ್ ಸಂಯೋಜಕರಾದ ಶ್ರೀಮತಿ ಪೂಜಿತ ವರ್ಮ, ರೇಂಜರ್ಸ್ & ರೋವರ್ಸ್ ಅಧಿಕಾರಿಗಳಾದ ಶ್ರೀ ಪ್ರಸಾದ್ ಕುಮಾರ್ ಹಾಗೂ ಡಾ. ರತ್ನಾವತಿ ಕೆ ಹಾಗೂ ಸಾಮಾಜಿಕ ಜವಾಬ್ದಾರಿಗಳ ಉಪಕ್ರಮಗಳ ಸಮಿತಿಗಳ ಸಂಯೋಜಕರು ಉಪಸ್ಥಿತರಿದ್ದರು.

ಎನ್ಎಸ್ಎಸ್ ಸ್ವಯಂಸೇವಕರಾದ ನವನೀತ್ ಕೃಷ್ಣ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅನನ್ಯ ವಂದಿಸಿದರು.

See also  ಮಂಗಳೂರು: ಭೂಕುಸಿತಗಳು- ಅದರ ಕಾರಣಗಳು, ಪರಿಣಾಮಗಳು ವಿಷಯದ ಕುರಿತ ಕಾರ್ಯಾಗಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು