News Kannada
Thursday, February 02 2023

ಕ್ಯಾಂಪಸ್

ಉಜಿರೆ: ಪರಿಸರದೊಂದಿಗೆ ನಮ್ಮ ಮನಸ್ಥಿತಿ ಕೂಡ ಕಲುಷಿತಗೊಳ್ಳುತ್ತಿದೆ – ಡಾ. ನರೇಂದ್ರ ರೈ ದೇರ್ಲ

Our mindset is also getting polluted with the environment - Dr. Narendra Rai Derla
Photo Credit : By Author

ಉಜಿರೆ: ಗುರುಕೇಂದ್ರಿತವಾಗಿದ್ದ ಶಿಕ್ಷಣ ವ್ಯವಸ್ಥೆ ಇಂದು ಪೋಷಕ ಕೇಂದ್ರಿತವಾಗಿಯೂ ಉಳಿಯದೇ ಬರೀ ಯಂತ್ರ ಕೇಂದ್ರಿತವಾಗಿ ಮಾರ್ಪಟ್ಟಿದೆ. ಹಾಗಾಗಿ ನಾವು ಭಾವನಾತ್ಮಕ ಸಂಬಂಧಗಳನ್ನು, ನೈತಿಕ ಜವಾಬ್ದಾರಿಗಳನ್ನು ಕಳೆದುಕೊಳ್ಳುತ್ತಾ ಸಾಗುತ್ತಿದ್ದೇವೆ ಎಂಬುದಾಗಿ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟರು.

ಉಜಿರೆ ಶ್ರೀ ಧ. ಮಂ. ಕಾಲೇಜಿನ ಕನ್ನಡ ವಿಭಾಗ ಮತ್ತು ಆಂತರಿಕ ಗುಣಮಟ್ಟ ಕೋಶ ಹಾಗೂ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ ‘ಚಿಂತನ ಸಿರಿ’ ಸಾಹಿತ್ಯ ಸಂಸ್ಕೃತಿ ಮನೋಲ್ಲಾಸ ಕಾರ್ಯಕ್ರಮದಲ್ಲಿ ‘ದೇಸಿ ಜ್ಞಾನ ಪರಂಪರೆ ಮತ್ತು ಶಿಕ್ಷಣ’ ಎಂಬ ವಿಷಯದ ಕುರಿತಾಗಿ ಮಾತನಾಡಿದರು.

ಹಿಂದೆ ಗ್ರಾಮಗಳಲ್ಲಿ ಒಬ್ಬರ ಭಾವನೆಗಳಿಗೆ ಇನ್ನೊಬ್ಬರು ಸ್ಪಂದಿಸುವಂತಹ ಪ್ರಪಂಚವಿತ್ತು. ಆದರೆ ಈಗಿನ ಕಾಲದಲ್ಲಿ ಹಳ್ಳಿಗಳ ಸಂಬಂಧ, ಸಹವಾಸ ಶಿಥಿಲವಾಗುತ್ತಿದೆ ಎಂದು ಅವರು ನುಡಿದರು.

ಹೊಸ ತಲೆಮಾರಿಗೆ ಸುಸ್ಥಿರ ಭೂಮಿಯನ್ನು ಹಸ್ತಾಂತರಿಸಲು ನಮ್ಮ ಪರಂಪರೆಯಲ್ಲಿನ ಹೊಳಹನ್ನು ತುಂಬುವ ಮಾರ್ಗ ಹುಡುಕುವುದು ಅನಿವಾರ್ಯವಾಗಿದೆ. ಅನುಭವ ಸತ್ಯದಿಂದ ಮಾತ್ರ ಬರದೆ ಸಂಬಂಧ ,ಸಹವಾಸಗಳ ಮೂಲಕ ಬರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಸ್ತುತ ದಿನದಲ್ಲಿ ಪರಿಸರವೂ ಸೇರಿದಂತೆ ಎಲ್ಲವೂ ಕಲುಷಿತವಾಗಿದೆ. ಇದಕ್ಕೆ ಮನಸ್ಸು ಕೂಡ ಹೊರತಾಗಿಲ್ಲ. ಮುಂದಿನ ತಲೆಮಾರಿಗೆ ವಿಷರಹಿತ ಪರಿಸರ ಹಾಗೂ ಮನಸ್ಸನ್ನು ನೀಡುವುದು ಮುಖ್ಯ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎ.ಜಯಕುಮಾರ್ ಶೆಟ್ಟಿ, ದ‌. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್, ಬೆಳ್ತಂಗಡಿ ಘಟಕದ ಅಧ್ಯಕ್ಷ ಡಿ. ಯದುಪತಿ ಗೌಡ, ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಹರೀಶ್ ಎಂ ವೈ, ಪ್ರಾಧ್ಯಾಪಕ ಹಳೆಮನೆ ರಾಜಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ದಿವಾಕರ್ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಸಂಘದ ಕಾರ್ಯದರ್ಶಿ ಜಯಶ್ರೀ ವಂದಿಸಿದರು.

See also  ಕೊಪ್ಪಳ: ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು