News Kannada
Monday, January 30 2023

ಕ್ಯಾಂಪಸ್

ಮಂಗಳೂರು ವಿವಿ: ಪಿ.ಹೆಚ್.ಡಿ. ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

Mangalore University: Ph.D. Inviting applications for the event
Photo Credit : News Kannada

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಕುಶಾಲನಗರ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಫೀಲ್ಡ್‌ ಮಾರ್ಷಲ್‌ ಕೆ ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿ, ಹಾಗೂ ಸಂಯೋಜಿತ ಕಾಲೇಜುಗಳಲ್ಲಿ  ಪಿಹೆಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಅಥವಾ ಪ್ರಾಂಶುಪಾಲರು, ಫೀಲ್ಡ್ ಮಾರ್ಷಲ್‌ ಕೆ ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿ/ ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟ, ಮಂಗಳೂರು. ದ ಕ. ಇವರಿಂದ ರೂ. 1,100/- ನ್ನು (ರೂಪಾಯಿ ಒಂದು ಸಾವಿರದ ನೂರು ಮಾತ್ರ) (ಎಸ್‌ಸಿ/ಎಸ್‌ಟಿ/ ಪ್ರವರ್ಗ-I ಅಭ್ಯರ್ಥಿಗಳು  ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ  ರೂ.550/-) ಚಲನ್/‌ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣಕಾಸು ಅಧಿಕಾರಿ, ಮಂಗಳೂರು ವಿಶ್ವವಿದ್ಯಾನಿಲಯ ಇವರ ಹೆಸರಿನಲ್ಲಿ ಪಡೆದ  ಡಿ. ಡಿ. ಮುಖಾಂತರ ಪಾವತಿಸಿ ಪಡೆಯ ಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ  ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು/ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ ಜನವರಿ 31, 2023 ರ ಒಳಗೆ ಸಲ್ಲಿಸತಕ್ಕದ್ದು.

ಖಾಲಿ ಇರುವ ಸೀಟುಗಳು/ ಮೀಸಲಾತಿ ವಿವರ ಮತ್ತು ಪಿಹೆಚ್.ಡಿ ಕಾರ್ಯಕ್ರಮಗಳನ್ನು ನಿಯಂತ್ರಿಸುವ ನಿಯಮಾವಳಿ ಹಾಗೂ ಮಾರ್ಗಸೂಚಿಯ ವಿವರಗಳು ಮತ್ತು ಅರ್ಜಿ ನಮೂನೆಗಳಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್  ಸೈಟ್ www.mangaloreuniversity.ac.in ನಿಂದ ಪಡೆದುಕೊಳ್ಳಬಹುದು, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

See also  ಕೊಡಿಯಲ್ ಬೈಲ್: ಸಂತ ಅಲೋಶಿಯಸ್ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪಾಲಕರ ದಿನಾಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು