News Karnataka Kannada
Friday, March 29 2024
Cricket
ಕ್ಯಾಂಪಸ್

ಮಂಗಳೂರು: ಮೇ 27 ರಂದು ಯಡಪಡಿತ್ತಾಯರಿಗೆ ಅಭಿನಂದನಾ ಕಾರ್ಯಕ್ರಮ

Felicitation programme for Yadapaditthaya on May 27
Photo Credit : News Kannada

ಮಂಗಳೂರು: ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ವಯೋನಿವೃತ್ತಿ ಹೊಂದಲಿರುವ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅವರ ಅಭಿನಂದನಾ ಕಾರ್ಯಕ್ರಮ ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಮೇ 27 (ಶನಿವಾರ) ರಂದು ಸಂಜೆ 4.30 ಕ್ಕೆ ಆಯೋಜಿಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆಗಿರುವ ಪದ್ಮವಿಭೂಷಣ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿರಲಿದ್ದಾರೆ. ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಎನ್‌. ವಿನಯ್‌ ಹೆಗ್ಡೆ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ.

ಸಮಾರಂಭದ ಭಾಗವಾಗಿ ಅಪರಾಹ್ನ 3 ರಿಂದ 4 ಗಂಟೆಯವರೆಗೆ ಮಂಗಳೂರು ವಿಶ್ವವಿದ್ಯಾನಿಲಯದ  ಶಿಕ್ಷಕೇತರ ಉದ್ಯೋಗಿಗಳ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ, ಎಂದು ಪ್ರೊ. ಪಿ ಎಸ್‌ ಯಡಪಡಿತ್ತಾಯ ಅಭಿನಂದನಾ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು