News Kannada
Friday, February 23 2024
ಕ್ಯಾಂಪಸ್

ಮಂಗಳೂರು: ಶಕ್ತಿ ಪದವಿ ಪೂರ್ವ ಕಾಲೇಜಿನ ವಾಲಿಬಾಲ್ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Sakthi PU College volleyball team selected for national level
Photo Credit : By Author

ಮಂಗಳೂರು: ಶಕ್ತಿನಗರ ಶಕ್ತಿ ಪದವಿ ಪೂರ್ವ ಕಾಲೇಜಿನ 19ರ ಒಳಗಡೆಯ ವಯೋಮಿತಿಯ ಬಾಲಕರ ವಾಲಿಬಾಲ್ ತಂಡವು ಕಲ್ಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ನಡೆದ ರಾಜ್ಯ ಮಟ್ಟದ  ವಿದ್ಯಾಭಾರತಿ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಕೊಂಡಿರುತ್ತಾರೆ.

ಶಕ್ತಿ ಪಪೂ ಕಾಲೇಜಿನ ದೈಹಿಕ ಶಿಕ್ಷಕರಾದ ಮನೋಜ್ ರವರು ತರಬೇತುದಾರರಾಗಿದ್ದು ಮಾರ್ಗದರ್ಶನ ಮಾಡಿರುತ್ತಾರೆ. ಈ ಮೂಲಕ ಶಕ್ತಿ ಪ.ಪೂ ಕಾಲೇಜು ವಾಲಿಬಾಲ್ ತಂಡ ಇದೇ ಬರುವ ನವೆಂಬರ್ 28ರಿಂದ ಉತ್ತರ ಪ್ರದೇಶದ ವೃಂದಾವನದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದೆ.

ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಯಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಯಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪ.ಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ ಅಭಿನಂದಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು