News Kannada
Monday, December 11 2023
ತಮಿಳು

ದುಬಾರಿ ರೋಲ್ಸ ರಾಯ್ಸ್‌ ಕಾರಿಗೆ ತೆರಿಗೆ ವಿನಾಯ್ತಿ ಕೋರಿದ್ದಕ್ಕೆ ನಟ ಧನುಷ್‌ ಗೆ ಕೋರ್ಟ್‌ ಛೀಮಾರಿ

ROLLS ROYCE
Photo Credit :

 

ಚೆನ್ನೈ ; ತಮಿಳು ಚಿತ್ರ ನಟ ಧನುಷ್‌ 2015ರಲ್ಲಿ ​ ರೋಲ್ಸ್​ ರಾಯ್ಸ್​ ಕಾರನ್ನು ವಿದೇಶದಿಂದ ಆಮದು ಮಾಡಿಕೊಂಡಿದ್ದರು. ಇದಕ್ಕೆ ಅವರು 60 ಲಕ್ಷ ರೂಪಾಯಿ ಎಂಟ್ರಿ ಟ್ಯಾಕ್ಸ್​ ಪಾವತಿ ಮಾಡಬೇಕಿತ್ತು. ಧನುಷ್ ಅರ್ಧದಷ್ಟು ತೆರಿಗೆ ಪಾವತಿಸಿ ಉಳಿದಿದ್ದಕ್ಕೆ ವಿನಾಯಿತಿ ನೀಡುವಂತೆ ಕೋರಿದ್ದರು. ಈ ಅರ್ಜಿಯನ್ನು ಮದ್ರಾಸ್​ ಹೈಕೋರ್ಟ್​ನ ನ್ಯಾಯಮೂರ್ತಿ ಎಸ್​.ಎಂ. ಸುಬ್ರಮಣಿಯಮ್​ ಅವರು ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ತೆರಿಗೆ ವಿನಾಯಿತಿ ನೀಡೋಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ಇಂದು ಧನುಷ್​ ಸಲ್ಲಿಕೆ ಮಾಡಿದ ಅರ್ಜಿ ವಿಚಾರಣೆಗೆ ಬಂದಿದೆ. ಈ ವೇಳೆ ಕೋರ್ಟ್​ಗೆ ಧನುಷ್​ ಪರ ವಕೀಲರು ಮನವಿ ಒಂದನ್ನು ಮಾಡಿಕೊಂಡರು. ‘ಧನುಷ್​ ಶೇ.50 ತೆರಿಗೆಯನ್ನು ತುಂಬಿದ್ದಾರೆ. ಉಳಿದ ತೆರಿಗೆಯನ್ನು ಪಾವತಿಸೋಕೆ ಅವರು ಇಚ್ಛಿಸಿದ್ದಾರೆ. ಹೀಗಾಗಿ, ಅರ್ಜಿ ಹಿಂಪಡೆಯೋಕೆ ಅವಕಾಶ ನೀಡಬೇಕು’ ಎಂದು ​ ವಕೀಲರು ಕೋರಿದರು. ಆದರೆ, ಕೋರ್ಟ್​ ಇದನ್ನು ನಿರಾಕರಿಸಿದೆ. ಅಲ್ಲದೆ, ಅರ್ಜಿ ವಿಚಾರಣೆ ನಡೆಸಿ ತೀರ್ಪನ್ನು ಕೂಡ ನೀಡಿದೆ.
‘ತೆರಿಗೆದಾರರ ಹಣವನ್ನು ಬಳಸಿಕೊಂಡು ನೀವು ರಸ್ತೆಗಳಲ್ಲಿ ಐಷಾರಾಮಿ ಕಾರನ್ನು ಓಡಿಸುತ್ತೀರಿ. ಹಾಲು ಮಾರಾಟಗಾರ ಮತ್ತು ದಿನಗೂಲಿ ಕಾರ್ಮಿಕರು ಕೂಡ ತಾವು ಖರೀದಿಸುವ ಪ್ರತಿ ಲೀಟರ್ ಪೆಟ್ರೋಲ್‌ಗೆ ತೆರಿಗೆ ಪಾವತಿಸುತ್ತಿದ್ದಾರೆ. ಈ ವ್ಯಕ್ತಿಗಳು ತೆರಿಗೆ ವಿನಾಯಿತಿ ಕೋರಿ ಹೈಕೋರ್ಟ್ ಅನ್ನು ಸಂಪರ್ಕಿಸಿಲ್ಲ’ ಎಂದು ಹೇಳುವ ಮೂಲಕ ನ್ಯಾಯಮೂರ್ತಿ ಎಸ್​.ಎಂ. ಸುಬ್ರಮಣಿಯಮ್ ಅವರು ಧನುಷ್​ಗೆ ಛೀಮಾರಿ ಹಾಕಿದರು. ಧನುಷ್​ ಪರ ವಕೀಲರು ಆಗಸ್ಟ್​ 9ರ ಒಳಗೆ ಬಾಕಿ ಇರುವ ತೆರಿಗೆ ಪಾವತಿ ಮಾಡುವುದಾಗಿ ಕೋರ್ಟ್​​ಗೆ ಭರವಸೆ ನೀಡಿದ್ದಾರೆ.

See also  ಚೆನ್ನೈ ನಲ್ಲಿ ಮಳೆ 9 ಜಿಲ್ಲೆಗಳಲ್ಲಿ ಇನ್ನೆರಡು ದಿನ ಶಾಲಾ-ಕಾಲೇಜುಗಳಿಗೆ ರಜೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು