ಬೆಂಗಳೂರು : ಹಿರಿಯ ನಟಿ ಎಸ್. ಲಿಲಾವತಿ ಕಾಲು ಜಾರಿಬಿದ್ದು ಸೊಂಟ ಮತ್ತು ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಈ ಘಟನೆ ನಡೆದಿದೆ. ತಕ್ಷಣ ಅವರನ್ನು ನೆಲಮಂಗಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪುತ್ರ ವಿನೋದ್ ರಾಜ್ ಜೊತೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದ ಲೀಲಾವತಿ ಅವರಿಗೆ ವೈದ್ಯರು ಒಂದು ತಿಂಗಳು ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ವಿನೋದ್ ರಾಜ್ ಬಚ್ಚಲು ಮನೆಯಲ್ಲಿ ಬಿದ್ದ ತಕ್ಷಣ ಲೀಲಾವತಿ ಅವರಿಗೆ ಬಾಗಿಲು ತೆಗೆಯಲು ಸಾಧ್ಯವಾಗಿಲ್ಲ. ಸುಮಾರು ಒಂದು ಅರ್ಧ-ಮುಕ್ಕಾಲು ಗಂಟೆ ಒದ್ದಾಡಿದ್ದಾರೆ. ಜೋರಾಗಿ ಕೂಗಿ ಯಾರನ್ನಾದರೂ ಕರೆಯಲೂ ಸಾಧ್ಯವಾಗಿಲ್ಲ. ಬಚ್ಚಲ ಮನೆಯಲ್ಲೇ ನೆರಳಾಡಿ ದ್ದಾರೆ. ಬಳಿಕ ನಿಧಾನವಾಗಿ ಬಾಗಿಲು ತೆಗೆದು ಹೊರಬಂದಿದ್ದಾರೆ ಎಂದು ವಿನೋದ್ ರಾಜ್ ಹೇಳಿದ್ದಾರೆ.