ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ನಿಧನ

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ನಿಧನ

Y.K   ¦    Nov 15, 2020 01:53:37 PM (IST)
ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ನಿಧನ

ಕೋಲ್ಕತಾ: ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ವಿಧಿವಶರಾಗಿದ್ದಾರೆ.

85 ವರ್ಷದ ಸೌಮಿತ್ರ ಚಟರ್ಜಿಯವರು ಸ್ಪಂದಿಸುತ್ತಿಲ್ಲ ಮತ್ತು ಒಂದಕ್ಕಿಂತ ಹೆಚ್ಚು ಲೈಫ್ ಸಪೋರ್ಟ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಪವಾಡ ನಡೆಯದ ಹೊರತು ನಾವು ಏನೂ ಹೇಳಲು ಸಾಧ್ಯವಿಲ್ಲ ಎಂದು ನಿನ್ನೆಯಷ್ಟೇ ವೈದ್ಯರು ತಿಳಿಸಿದ್ದರು.

ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸೌಮಿತ್ರ ಚಟರ್ಜಿಯವರು ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆಂದು ವರದಿಗಳು ತಿಳಿಸಿವೆ. ಅವರಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು.