ಹುಟ್ಟು ಹಬ್ಬದ ದಿನ ಸರ್ಕಾರಿ ಶಾಲೆಯನ್ನು ದತ್ತು ಪಡೆದ ಪ್ರಜ್ವಲ್ ದೇವರಾಜ್

ಹುಟ್ಟು ಹಬ್ಬದ ದಿನ ಸರ್ಕಾರಿ ಶಾಲೆಯನ್ನು ದತ್ತು ಪಡೆದ ಪ್ರಜ್ವಲ್ ದೇವರಾಜ್

YK   ¦    Jul 04, 2019 04:10:31 PM (IST)
ಹುಟ್ಟು ಹಬ್ಬದ ದಿನ ಸರ್ಕಾರಿ ಶಾಲೆಯನ್ನು ದತ್ತು ಪಡೆದ ಪ್ರಜ್ವಲ್ ದೇವರಾಜ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರು ಇಂದು 32 ವರ್ಷದ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಸರ್ಕಾರಿ ಕನ್ನಡ ಶಾಲೆಯೊಂದನ್ನು ದತ್ತು ಪಡೆಯುವ ಮೂಲಕ ಮಾದರಿಯಾಗಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರಜ್ಷಲ್ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿ ಬರೆದುಕೊಂಡ ದರ್ಶನ್, ‘ ನಮ್ಮ ಹುಡ್ಗ ಪ್ರಜ್ಜು ಒಂದು ಕನ್ನಡ ಸರ್ಕಾರಿ ಶಾಲೆಯನ್ನು ದತ್ತು ಪಡೆದಿರುವ ಸುದ್ದಿ ಕೇಳಿ ತುಂಬಾನೇ ಖುಷಿಯಾಯ್ತು. ಇಂಥ ಸಾಮಾಜಿಕ ಕಳಕಳಿಯ ಕೆಲಸಗಳಲ್ಲಿ ಹೀಗೇ ಸದಾ ಮುಂಚೂಣಿಯಲ್ಲಿರಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಜ್ವಲ್ ತಮ್ಮ ಇನ್ ಸ್ಟಾಗ್ರಾಂ ನಲ್ಲಿ ವಿಡಿಯೋ ಹಾಕಿ ಶಾಲೆ ದತ್ತು ಪಡೆದುಕೊಂಡಿರುವ ಬಗ್ಗೆ ಹೇಳಿಕೊಂಡಿದ್ದಾರೆ.