2018ರಲ್ಲಿ ಅತ್ಯುತ್ತಮ ಕಿರುಚಿತ್ರ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದ, ಮಹಾನ್ ಹುತಾತ್ಮ ಕಿರುಚಿತ್ರ ಬಳಿಕ 20ಕ್ಕೂ ಅಧಿಕ ಸಿನಿಮೋತ್ಸವಗಳಲ್ಲಿ ಭಾಗವಹಿಸಿದೆ.
ಸುಮಾರು ಹತ್ತಕಿಂತಲು ಹೆಚ್ಚು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ 'ಮಹಾನ್ ಹುತಾತ್ಮ' ಕಿರುಚಿತ್ರ ಏಪ್ರಿಲ್ 9 ರಂದು ಬಿಡುಗಡಯಾಗಲಿದೆ.
ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರ ಪುತ್ರ ಸಾಗರ್ ಪುರಾಣಿಕ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಇದೇ ಏ. 9 ರಂದು ಎಂಎಚ್ ಫಿಲಂ.ಇನ್ ನಲ್ಲಿ ಪೇಡ್ ಪ್ರೀಮಿಯರ್ ಆಗಲಿದೆ. ರೂ.30 ನೀಡಿ ಕಿರುಚಿತ್ರವನ್ನು ವೀಕ್ಷಿಸಬಹುದಾಗಿದೆ.
ಅಕ್ಷಯ್ ಎಂಟರ್ಟೈನ್ ಮೆಂಟ್ ಮತ್ತು ಪುರಾಣಿಕ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿದ್ಧವಾಗಿರುವ 'ಮಹಾನ್ ಹುತಾತ್ಮ' ಕಿರುಚಿತ್ರ 2018ರಲ್ಲಿ, ಅತ್ಯುತ್ತಮ ಕಿರುಚಿತ್ರ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿತ್ತು.
ಅದಾದ ಬಳಿಕ 20ಕ್ಕೂ ಅಧಿಕ ಸಿನಿಮೋತ್ಸವಗಳಲ್ಲಿ ಭಾಗವಹಿಸಿ ಹತ್ತಾರು ಅವಾರ್ಡ್ ಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.
ಈ ಕಿರುಚಿತ್ರದಲ್ಲಿ ಅಕ್ಷಯ್ ಹಾಗೂ ಅದ್ವಿತಿ ಶೆಟ್ಟಿ ಜೊತೆಗೆ ಹಿರಿಯ ನಟ ಶ್ರೀನಾಥ್, ಸಾಗರ್ ಪುರಾಣಿಕ್, ಅಚಿಂತ್ಯ ಪುರಾಣಿಕ್, ವರುಣ್ ಶ್ರೀನಿವಾಸ್, ಕುಲ್ದೀಪ್, ಮನೋಜ್, ಶಶಿಕುಮಾರ್, ಪೀಟರ್, ವರುಣ್ ಶ್ರೀನಿವಾಸ್ ರಾಜಗುರು ಸಹ ಅಭಿನಯಿಸಿದ್ದಾರೆ.
'ಡ್ರಾಮಾ ಜ್ಯೂನಿಯರ್ಸ್' ಖ್ಯಾತಿಯ ಅಚಿಂತ್ಯ, ಈ ಚಿತ್ರದಲ್ಲಿ ನಟಿಸಿದ್ದು, ವಿಶೇಷ ಪಾತ್ರದಲ್ಲಿ ವೀಕ್ಷಕರ ಗಮನ ಸೆಳೆಯುತ್ತಾನೆ.