ಮೊದಲ ಬಾರಿಗೆ ಕನ್ನಡದಲ್ಲಿ ಖ್ಯಾತ ನಟರಾದ ಶಿವರಾಜ್ ಕುಮಾರ್ ಹಾಗೂ ಸುದೀಪ್ ಜೊತೆಯಾಗಿ ‘ಕಲಿ’ ಎಂಬ ಸಿನಿಮಾದಲ್ಲಿ ನಟಿಸಲಿದ್ದಾರೆ.
ಶಿವಣ್ಣ ಹಾಗೂ ಸುದೀಪ್ ಅವರನ್ನು ಒಂದುಗೂಡಿಸಿದ್ದು ‘ಕಲಿ’ ಸಿನಿಮಾ ನಿರ್ದೇಶಕ ಜೋಗಿ ಪ್ರೇಮ್. ಬಹುಭಾಷೆಗಳಲ್ಲಿ ನಿರ್ಮಾಣವಾಗಲಿರುವ ಈ ಸಿನಿಮಾ ಪ್ರೇಮ್ ಅವರ ಡ್ರೀಮ್ ಪ್ರಾಜೆಕ್ಟ್ ಆಗಿದ್ದು, ಇದಕ್ಕೆ ಇಬ್ಬರೂ ಸ್ಟಾರ್ ಗಳನ್ನು ಒಪ್ಪಿಸಿದ್ದಾರೆ. ಚಿತ್ರವನ್ನು ಸಿ.ಆರ್. ಮನೋಹರ್ ಅವರು ನಿರ್ಮಾಣ ಮಾಡಲಿದ್ದಾರೆ. ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಿರ್ಮಾಣವಾಗಲಿರುವ ಈ ಚಿತ್ರಕ್ಕೆ ಬರೋಬ್ಬರಿ 110 ಕೋಟಿ ರೂ. ವೆಚ್ಛ ಮಾಡಲಾಗುವುದು ಎಂದು ಹೇಳಲಾಗಿದ್ದು, ಚಿತ್ರೀಕರಣಕ್ಕೆ ಪೂರ್ವ ತಯಾರಿಗಳು ನಡೆದಿವೆ. ಈ ಚಿತ್ರದಲ್ಲಿ ಕಮಲ್ ಹಾಸನ್ ಕೂಡ ನಟಿಸಲಿದ್ದಾರೆ ಎಂದು ತಿಳಿದು ಬಂದಿದೆ.