ಮೈಸೂರು: ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಇತರ ಜಿಲ್ಲೆಗಳಲ್ಲೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಸಲು ವಾಣಿಜ್ಯ ಮಂಡಳಿ ಚಿಂತನೆ ನಡೆಸಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಾ. ರಾಜೇಂದ್ರ ಸಿಂಗ್ ಬಾಬು ತಿಳಿಸಿದರು.
ಜನವರಿ 5 ರಂದು ಮೈಸೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪದ ಬಗ್ಗೆ ಮಾತನಾಡಿದ ಅವರು ನಾಳೆ ಸಿಎಂ ಸಿದ್ದರಾಮಯ್ಯ ಮೂರು ಭಾಷೆಯ ಚಿತ್ರಗಳ 8 ವಿಭಾಗದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಅಲ್ಲದೆ ಸಿನಿಮೋತ್ಸವದಲ್ಲಿ ಹಲವು ಪ್ರಖ್ಯಾತ ನಟ-ನಟಿಯರು ಭಾಗವಹಿಸಲಿದ್ದು, ಈ ಹಿನ್ನಲೆಯಲ್ಲಿ ವಾಣಿಜ್ಯ ಮಂಡಳಿಗೆ ರಜೆ ಘೋಷಿಸಿರುವುದಾಗಿ ಹೇಳಿದರು.
ಮೈಸೂರಿನ ಅರಮನೆ ಮುಂಭಾಗ ಸಮಾರೋಪ ಸಮಾರಂಭ ನಡೆಯಲಿದ್ದು ಈಗಾಗಲೇ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಈ ಸಂಬಂಧ ಸೂಕ್ತ ರೀತಿಯ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.