ದೇಶದ ಸಿನಿಪ್ರಿಯರು ಕುತೂಹಲದಿಂದ ಕಾಯುತ್ತಿರುವ ಭಾರತ ಚಿತ್ರರಂಗದ ಇತಿಹಾಸದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದ ಬಾಹುಬಲಿ’ ಚಿತ್ರದ ಮುಂದುವರಿದ ಭಾಗ ‘ಬಾಹುಬಲಿ–2’ ಟ್ರೇಲರ್ ಮಾರ್ಚ್ 16ಕ್ಕೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಎಸ್.ಎಸ್ ರಾಜಮೌಳಿ ತಿಳಿಸಿದ್ದಾರೆ.
ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಎಲ್ಲ ಚಿತ್ರ ಮಂದಿರಗಳಲ್ಲಿ ಮಾರ್ಚ್ 16ರಂದು ಬೆಳಗ್ಗೆ 9 ಗಂಟೆಗೆ ಟ್ರೇಲರ್ ಬಿಡುಗಡೆಯಾಗಲಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅದೇ ದಿನ ಸಂಜೆ 5 ರಿಂದ 6 ಗಂಟೆಗೆ ಟ್ರೇಲರ್ ವೀಕ್ಷಿಸಬಹುದು’ ಎಂದು ರಾಜಮೌಳಿ ಹೇಳಿದ್ದಾರೆ.
ಈ ಚಿತ್ರದಲ್ಲಿ ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಶೋಭು ಯಲ್ರಗಡ್ಡ, ರಾಘವೇಂದ್ರ ರಾವ್, ಪ್ರಸಾದ್ ದೇವಿನೇನಿ ಚಿತ್ರದ ನಿರ್ಮಾಪಕರಾಗಿದ್ದು, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ತೆರೆಕಾಣಲಿರುವ ಈ ಚಿತ್ರ ಏಪ್ರಿಲ್ 28ರಂದು ಬಿಡುಗಡೆಯಾಗಲಿದೆ.