2.24 ನಿಮಿಷದ ಬಾಹುಬಲಿ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಎಲ್ಲೆಡೆಯೂ ಸಖತ್ ಸದ್ದು ಮಾಡುತ್ತಿದೆ.
ಐದು ಲಕ್ಷಕ್ಕೂ ಹೆಚ್ಚು ಮಂದಿ ಧರ್ಮ ಪ್ರೊಡಕ್ಷನ್ನ ಯೂಟ್ಯೂಬ್ ಚಾನೆಲ್ನಲ್ಲಿರುವ ಬಾಹುಬಲಿ–2’ ಚಿತ್ರದ ಟ್ರೈಲರ್ ಅನ್ನು ವೀಕ್ಷಿಸಿದ್ದು, ನಿನ್ನೆ ರಾತ್ರಿ ಟ್ರೈಲರ್ ಬಿಡುಗಡೆ ಮಾಡಲಾಗಿದೆ.
ಈ ಚಿತ್ರದಲ್ಲಿ ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದು, ಭಾರತದ ಸ್ಟಾರ್ ಡೈರೆಕ್ಟರ್ ಎಸ್.ಎಸ್. ರಾಜಮೌಳಿ ನಿರ್ದೇಶನ ಈ ಚಿತ್ರದ ಕೇಂದ್ರಬಿಂದುವಾಗಿದ್ದು, ಏಪ್ರಿಲ್ 28ಕ್ಕೆ ಚಿತ್ರ ಬಿಡುಗಡೆಯಾಗಲಿದೆ.