News Kannada
Sunday, November 27 2022

ಮನರಂಜನೆ

ಇಂದಿನಿಂದ ಕೊಲ್ಕತ್ತಾದಲ್ಲಿ ಕನ್ನಡ ಚಲನಚಿತ್ರೋತ್ಸವ - 1 min read

Photo Credit :

ಇಂದಿನಿಂದ ಕೊಲ್ಕತ್ತಾದಲ್ಲಿ ಕನ್ನಡ ಚಲನಚಿತ್ರೋತ್ಸವ

ಬೆಂಗಳೂರು: ಜುಲೈ 21ರಿಂದ 24ರವರೆಗೆ ಕೋಲ್ಕತ್ತಾದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಭಾರತೀಯ ಚಲನಚಿತ್ರ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಮೂರು ದಿನಗಳ ಕನ್ನಡ ಚಲನಚಿತ್ರೋತ್ಸವ ನಡೆಯಲಿದೆ.

ಅನನ್ಯ ಕಾಸವರಳ್ಳಿ ನಿರ್ದೇಶನದ ಹರಿಕಥಾ ಪ್ರಸಂಗ, ಬಿ.ಎಂ.ಗಿರಿರಾಜ್ ನಿರ್ದೇಶನದ ಅಮರಾವತಿ, ಪವನ್ ಕುಮಾರ್ ನಿರ್ದೇಶನದ ಯೂಟರ್ನ್, ಪೃಥ್ವಿ ಕೋಣನೂರು ನಿರ್ದೇಶನದ ರೈಲ್ವೆ ಚಿಲ್ಡ್ರನ್, ರಿಶಿಬ್ ಶೆಟ್ಟಿ ನಿರ್ದೇಶನದ ಕಿರಿಕ್ ಪಾರ್ಟಿ, ಡಿ.ಸತ್ಯಪ್ರಕಾಶ್ ನಿರ್ದೇಶಿಸಿರುವ ರಾಮ ರಾಮ ರೇ ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

ಹಲವಾರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿರುವ ಹಾಗೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳನ್ನು ಪಡೆದಿರುವ ತಿಥಿ ಚಿತ್ರವನ್ನು ಉದ್ಘಾಟನಾ ಚಿತ್ರವಾಗಿ ಪ್ರದರ್ಶಿಸಲಾಗುತ್ತದೆ. ವಾರ್ತಾಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರಾದ ಎನ್.ಆರ್.ವಿಶುಕುಮಾರ್, ಚಲನಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ , ಸಂಗೀತ ನಿರ್ದೇಶಕ ಹಂಸಲೇಖ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ ಬಾಬು ಚಲನಚಿತ್ರೋತ್ಸವದಲ್ಲಿ ಭಾಗವಹಿಸಲಿದ್ದಾರೆ.

See also  ರಂಗೇರಿದ ಚುನಾವಣಾ ಕಾವು: ಸ್ಟಾರ್ ನಟರಿಂದ ಸಿಕ್ತು ಇನ್ನಷ್ಟು ರಂಗು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು