News Kannada
Tuesday, September 27 2022

ಮನರಂಜನೆ

ದಸರಾ ಚಲನಚಿತ್ರೋತ್ಸವದಲ್ಲಿ ಮೆರುಗು ನೀಡಲಿದ್ದಾರೆ ಚಿತ್ರರಂಗದ ತಾರೆಯರು - 1 min read

Photo Credit :

ದಸರಾ ಚಲನಚಿತ್ರೋತ್ಸವದಲ್ಲಿ ಮೆರುಗು ನೀಡಲಿದ್ದಾರೆ ಚಿತ್ರರಂಗದ ತಾರೆಯರು

ಮೈಸೂರು- ದಸರಾ ಚಲನಚಿತ್ರೋತ್ಸವಕ್ಕೆ ಉದ್ಘಾಟನಾ ಸಮಾರಂಭಕ್ಕೆ ಭರ್ಜರಿ ಚಿತ್ರದ ನಾಯಕ ನಟ ಧ್ರುವ ಸರ್ಜಾ, ಡೆಡ್ಲಿ ಸೋಮ ಆದಿತ್ಯ ಇನ್ನಿತರ ತಾರೆಯರ ಮೆರುಗು ನೀಡಲಿದ್ದಾರೆ. ಉದ್ಘಾಟನಾ ಚಲನಚಿತ್ರವಾಗಿ ಕಲಾಮಂದಿರದಲ್ಲಿ ‘ಒಂದು ಮೊಟ್ಟೆಯ ಕಥೆ’ ಪ್ರದರ್ಶನ. ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಮೈಸೂರು ದಸರಾ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭ ಈ ಬಾರಿ ಹೆಚ್ಚು ಆಕರ್ಷಣೆಯಾಗಿದೆ.

ಇತ್ತೀಚೆಗೆ ಬಿಡುಗಡೆಯಾಗಿರುವ ಭರ್ಜರಿ ಚಿತ್ರದ ನಾಯಕ ನಟ ಧ್ರುವ ಸರ್ಜಾ, ನಾಯಕಿ ರಚಿತ ರಾಮ್, ನಾಯಕ ನಟರುಗಳಾದ ಆದಿತ್ಯ, ಸಂಚಾರಿ ವಿಜಯ್, ಹಿರಿಯ ಕಲಾವಿದರಾದ ಸುಂದರ್ ರಾಜ್, ಶೋಭರಾಜ್, ನಿರ್ದೇಶಕರುಗಳಾದ ಪಿ.ಶೇಷಾದ್ರಿ, ನಂದಕಿಶೋರ್, ಇತ್ತೀಚೆಗೆ ಹೆಚ್ಚು ಜನಪ್ರಿಯಗೊಳ್ಳುತ್ತಿರುವ `ಒಂದು ಮೊಟ್ಟೆಯ ಕಥೆ’ ಚಿತ್ರದ ನಾಯಕ ಹಾಗೂ ನಿರ್ದೇಶಕ ರಾಜ್ ಬಿ.ಶೆಟ್ಟಿ, ಕಿರುತೆರೆಯಲ್ಲಿ ಹೆಚ್ಚು ಜನಪ್ರಿಯಗೊಂಡಿರುವ ಮಿ. ಅಂಡ್ ಮಿಸಸ್ ರಂಗೇಗೌಡ ಧಾರವಾಹಿಯ ಕಲಾವಿದರಾದ ಶಶಿ ರಾಜ್ ಹಾಗೂ ಸಂಭ್ರಮಾಗೌಡ ಅವರು `ರಣರಣಕ’ ಚಿತ್ರದಲ್ಲಿ ನಾಯಕ ನಾಯಕಿಯಾಗಿ ಅಭಿನಯಿಸುತ್ತಿದ್ದು, ಆ ಚಿತ್ರದ ತಂಡ ಕೂಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ.

ಪನೊರಮಾ ಚಿತ್ರಗಳ ಸೇರ್ಪಡೆ: ಮೊದಲ ಬಾರಿಗೆ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ದಿನ ಪೂರ್ತಿ ಪ್ರದರ್ಶನವನ್ನು ಆಯೋಜಿಸಲಾಗುತ್ತಿದೆ. ಡಿ.ಆರ್.ಸಿ. ಒಂದು ಪರದೆಯನ್ನು ಮತ್ತು ಐನಾಕ್ಸ್ ಚಿತ್ರಮಂದಿರದಲ್ಲಿ ಒಂದು ಪರದೆಯಲ್ಲಿ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಸಾರ್ವಜನಿಕರಿಂದ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪನೊರಮಾ ಚಿತ್ರಗಳನ್ನು ಐನಾಕ್ಸ್ ಚಿತ್ರಮಂದಿರದ ಇನ್ನೊಂದು ಪರದೆಯಲ್ಲಿ ಪ್ರದರ್ಶನಕ್ಕೆ ಹೆಚ್ಚುವರಿ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ದಸರಾ ಚಲನ ಚಿತ್ರೋತ್ಸವವನ್ನು ಸೆಪ್ಟೆಂಬರ್ 21, 2017 ರಂದು ಗುರುವಾರ ಬೆಳಗ್ಗೆ 10 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸುವರು. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು, ಕನ್ನಡ ಚಿತ್ರರಂಗದ ಗಣ್ಯರು ಸೇರಿದಂತೆ ಹಲವಾರು ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸುವರು. ಐನಾಕ್ಸ್ ಚಿತ್ರಮಂದಿರದಲ್ಲಿ ವಿವಿಧ ದೇಶಗಳ ಚಲನಚಿತ್ರಗಳು ಪ್ರದರ್ಶನವಾಗುವುದರಿಂದ ಚಲನಚಿತ್ರಗಳ ವಸ್ತು ವಿಷಯಗಳು 18 ವರ್ಷ ಮೇಲ್ಮಟ್ಟವರಿಗೆ ಸೂಕ್ತವಾಗಿರುತ್ತವೆ. ಆದ್ದರಿಂದ ನೋಂದಣಿಗೆ 18 ವರ್ಷ ಮೇಲ್ಮಟ್ಟದವರಿಗೆ ಅವಕಾಶ ಕಲ್ಪಿಸಲಾಗಿದೆ. ಒಂದೇ ದಿನ 100 ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ. ನೋಂದಣಿಗೆ ವಾರ್ತಾ ಭವನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಆಸಕ್ತರು ನೋಂದಣಿ ಮಾಡಿಸಿಕೊಳ್ಳಬಹುದು. ಐನಾಕ್ಸ್ ಚಿತ್ರಮಂದಿರದಲ್ಲಿ ನೋಂದಣಿ ರೂ. 300/- ನಿಗದಿಮಾಡಲಾಗಿದ್ದು, ನೋಂದಣಿ ಮಾಡಿಸಿಕೊಂಡವರಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ.

ಡಿ.ಆರ್.ಸಿ. ಚಿತ್ರಮಂದಿರದಲ್ಲಿ ಪ್ರದರ್ಶನವಾರು ರೂ. 30/- ದರ ನಿಗದಿ ಮಾಡಲಾಗಿದ್ದು, ಇದಕ್ಕೆ ವಯೋಮಿತಿ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಾತ್ಮಕ ನಿರ್ದೇಶಕರಾದ ಮನು ಅವರನ್ನು ದೂರವಾಣಿ ಸಂಖ್ಯೆ: 9448092049ಗೆ ಸಂಪರ್ಕಿಸಬಹುದು. ಒಂದು ಮೊಟ್ಟೆಯ ಕಥೆ: 2017ರ ಜುಲೈನಲ್ಲಿ ಬಿಡುಗಡೆಯಾಗಿ ಹೆಚ್ಚು ಜನಪ್ರಿಯಗೊಂಡಿರುವ ಕನ್ನಡದ ಚಲನಚಿತ್ರ `ಒಂದು ಮೊಟ್ಟೆಯ ಕಥೆ’ ಚಿತ್ರವನ್ನು ಕಲಾಮಂದಿರದಲ್ಲಿ ಉದ್ಘಾಟನಾ ನಂತರ ಪ್ರದರ್ಶಿಸಲಾಗುತ್ತಿದೆ. ರಾಜ್ ಬಿ. ಶೆಟ್ಟಿ ಅವರು ಅಭಿನಯಿಸಿ, ನಿರ್ದೇಶಿಸಿರುವ ಚಿತ್ರ ಇದು. ಯು-ಟರ್ನ್ ಚಿತ್ರ ನಿರ್ದೇಶಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡ ಪವನ್ ಕುಮಾರ್ ಅವರು ಈ ಚಲನಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹಾಸ್ಯ ಪ್ರಧಾನವಾದ ಚಿತ್ರವಿದು. ದಸರಾ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಇದೇ ಮೊದಲ ಬಾರಿಗೆ ಚಲನಚಿತ್ರ ಪ್ರದರ್ಶೀಸಲಾಗುತ್ತಿದೆ.

See also  ತೆರೆಗೆ ಬರೋ ಇಂಜಿನಿಯರ್ಸ್ ಪ್ರೇಕ್ಷಕರ ಸೆಳೆಯುತ್ತಾ?

ಗೋಷ್ಠಿಯಲ್ಲಿ ಚಿತ್ರೋತ್ಸವದ ಉಪವಿಶೇಷಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಟಿ. ಯೋಗೇಶ್, ಉಪಾಧ್ಯಕ್ಷರಾದ ರವಿಚಂದ್ರು, ಕಾರ್ಯಾಧ್ಯಕ್ಷರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಆರ್. ರಾಜು ಹಾಗೂ ಕಾರ್ಯದರ್ಶಿ ಕೃಷ್ಣಪ್ಪ ಹಾಗೂ ಡೈರೆಕ್ಷರ್ ಮನು ಅವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು