ಮೈಸೂರು: ನಟ, ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ ಸಹೋದರ 69ವರ್ಷದ ಡಾ.ಹರೀಶ್ ಇಂದು ತಮ್ಮ ಮೈಸೂರಿನಲ್ಲಿರುವ ನಿವಾಸದಲ್ಲಿಯೇ ನಿಧನರಾಗಿದ್ದಾರೆ. ಇವರು ವೃತ್ತಿಯಲ್ಲಿ ವೈದ್ಯರಾಗಿದ್ದು ತಮ್ಮದೇ ಸ್ವಂತ ಕ್ಲಿನಿಕ್ ಅನ್ನ ನಡೆಸುತ್ತಿದ್ದರು.
1948ರಲ್ಲಿ ಜನಿಸಿದ್ದ ಡಾ.ಹರೀಶ್ 35ವರ್ಷಗಳಿಂದ ಕೆ.ಎಂ.ದೊಡ್ಡಿಯಲ್ಲಿ ತಮ್ಮದೇ ಸ್ವಂತ ಕ್ಲಿನಿಕ್ ನಡೆಸುತ್ತಿದ್ದರು. ಹರೀಶ್ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಹರೀಶ್ ಇಂದು ನಿಧರಾಗಿದ್ದಾರೆ.
ನಟ ಅಂಬರೀಶ್ ಮೈಸೂರಿನತ್ತ ಪ್ರಯಾಣ ಬೆಳೆಸಿದ್ದು ಪತ್ನಿ ಸುಮಲತಾ ಹಾಗೂ ಪುತ್ರ ಅಭಿಷೇಕ್ ಗೌಡ ಕೂಡ ಹರೀಶ್ ಅವರ ಅಂತಿಮ ದರ್ಶನವನ್ನು ಪಡೆಯಲಿದ್ದಾರೆ. ಹರೀಶ್ ಅವರ ಮಕ್ಕಳು ವಿದೇಶದಲ್ಲಿ ನೆಲೆಸಿದ್ದು, ಮಕ್ಕಳು ಬಂದ ಬಳಿಕ ಅಂತಿಮ ಸಂಸ್ಕಾರ ನಡೆಯಲಿದೆ.