News Kannada
Sunday, September 25 2022

ಮನರಂಜನೆ

ಮೇ 25ರಂದು ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಚಿತ್ರ ತೆರೆಗೆ - 1 min read

Photo Credit :

ಮೇ 25ರಂದು ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಚಿತ್ರ ತೆರೆಗೆ

ಮಂಗಳೂರು: ಕಲರ್ಸ್ಆಫ್ ಆನೇಕಲ್ ಹೆಸರಿನಲ್ಲಿ ಸುದರ್ಶನ್, ರಾಮಮೂರ್ತಿ ಹಾಗೂ ದುಬೈಯ ಖ್ಯಾತ ಉದ್ಯಮಿ, ಹೆಸರಾಂತ ಗಾಯಕರು ಆಗಿರುವ ಹರೀಶ್ ಶೇರಿಗಾರ್ ಮತ್ತು ಅವರ ಧರ್ಮಪತ್ನಿ ಶರ್ಮಿಳಾ ಶೇರಿಗಾರ್ ಅವರ ಆಕ್ಮೇ ಮೂವೀಸ್ ಇಂಟರ್ನ್ಯಾಶನಲ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಖ್ಯಾತ ನಿರ್ದೇಶಕ ನರೇಂದ್ರಬಾಬು ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಬಹು ನಿರೀಕ್ಷಿತ ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಕನ್ನಡ ಚಲನ ಚಿತ್ರ ಮೇ 25 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಹರೀಶ್ ಶೇರಿಗಾರ್ ತಿಳಿಸಿದ್ದಾರೆ.

ಮಂಗಳವಾರ ಮಂಗಳೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಮಾಹಿತಿ ನೀಡಿದ ಅವರು, ಹಿರಿಯ ನಟ ಅನಂತ್ ನಾಗ್ ಮತ್ತು ಯುವ ನಟಿ ರಾಧಿಕ ಚೇತನ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಕಬ್ಬಡ್ಡಿ, ಸಂತೆಯಲ್ಲಿ ನಿಂತ ಕಬೀರ” ಸೇರಿದಂತೆ ಹೊಸಬಗೆಯ ಸಿನಿಮಾ ಮಾಡಿರುವ ನಿರ್ದೇಶಕ ನರೇಂದ್ರಬಾಬು, ಈ ಚಿತ್ರದ ಮೂಲಕ ಮತ್ತೊಂದು ಹೊಸ ಬಗೆಯ ಚಿತ್ರ ನೀಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಈ ವರೆಗೂ ಯಾರು ಮಾಡದಂಥ ವಿಭಿನ್ನ ಕಥಾ ಹಂದರವಿದೆ. ಚಿತ್ರದ ಕತೆ ಬಗ್ಗೆ ಗೌಪ್ಯತೆ ಕಾಪಾಡಿಕೊಂಡಿರುವ ಸಿನಿಮಾ ಚಿತ್ರಕಥೆಯಲ್ಲಿ ಬಹಳ ರೋಚಕತೆಯಿಂದ ಮಾಡಿದೆ. ಈ ಸಿನಿಮಾ ಚಿತ್ರದ ಕಥೆ, ತಾರಾಬಳಗ ಹಾಗೂ ತಾಂತ್ರಿಕವರ್ಗದ ಕಾರಣದಿಂದಾಗಿ ಸ್ಯಾಂಡಲ್ವುಡ್ನಲ್ಲಿ ಭರವಸೆ ಮೂಡಿಸಿದೆ. ಮಾತ್ರವಲ್ಲದೇ ಚಿತ್ರದ ಟ್ರೈಲರ್ ಕೂಡ ವಿಭಿನ್ನವಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ ಎಂದರು.

ನಿರ್ದೇಶಕ ನರೇಂದ್ರಬಾಬು ಅವರು ಮಾತನಾಡಿ, ಇದು ಎರಡು ಜನರೇಷನ್ ಕಥೆ ಹೊಂದಿದೆ. ಒಂದು ಅನಂತ್ ನಾಗ್ ಅವರ ಕಥೆ ಸಾಗಿದರೆ, ಇನ್ನೊಂದು ರಾಧಿಕಾ ಚೇತನ್ ಜನರೇಷನ್ ಕಥೆ ತೆರೆದುಕೊಳ್ಳುತ್ತೆ. ಮುಖ್ಯವಾಗಿ ಲಿವಿಂಗ್ ರಿಲೇಷನ್ ಶಿಪ್ ಕುರಿತಾದ ಹೂರಣವಿದೆ. ಈ ಎರಡೂ ಕಥೆಗಳಲ್ಲಿ ಸೂಕ್ಷ್ಮತೆಗಳಿವೆ. ಭದ್ರತೆ, ಅಭದ್ರತೆ ಕುರಿತಾದ ಅಂಶಗಳು ಚಿತ್ರದಲ್ಲಿವೆ ಎಂದು ಹೇಳಿದರು.

ಚಿತ್ರ ತಂಡಕ್ಕೆ ಹಣಕಾಸಿನ ಸಮಸೈ ಎದುರಾದಾಗ ಹಿರಿಯ ನಟ ಅನಂತ್ ನಾಗ್ ಅವರು ಮಂಗಳೂರಿನವರೇ ಆದ ದುಬೈಯ ಖ್ಯಾತ ಉದ್ಯಮಿ, ಹೆಸರಾಂತ ಗಾಯಕ, ನಿರ್ಮಾಪಕ ಹರೀಶ್ ಶೇರಿಗಾರ್ ಅವರ ಸಹಾಯ ಪಡೆಯುವ ಬಗ್ಗೆ ಸಲಹೆ ನೀಡಿದರು. ಅವರಿಬ್ಬರ ಸ್ನೇಹ ದಿಂದಾಗಿ ಈಗಾಗಲೇ ಮಾರ್ಚ್ 22 ಸಿನೆಮಾ ನಿರ್ಮಿಸಿ ಯಶಸ್ಸು ಕಂಡಿರುವ ಹರೀಶ್ ಶೇರಿಗಾರ್ ಅವರು ನಮ್ಮೊಂದಿಗೆ ಕೈಜೋಡಿಸಿದರು. ಮಾತ್ರವಲ್ಲದೇ ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಚಿತ್ರದ ದುಬೈ ಚಿತ್ರೀಕರಣದ ಎಲ್ಲ ಜವಾಬ್ದಾರಿ, ಹಣಕಾಸಿನ ವ್ಯವಸ್ಥೆಯನ್ನೆಲ್ಲ ಹರೀಶ್ ಶೇರಿಗಾರ್ ಅವರೇ ವಹಿಸಿದರು.

ಸಿನಿಮಾ ಚೆನ್ನಾಗಿ ಮೂಡಿ ಬಂದಿರುವುದರಿಂದ ಎಲ್ಲರಿಗೂ ತಲುಪಿಸುವ ಜವಾಬ್ದಾರಿಯನ್ನೂ ಅನಂತ್ ತಗೆದುಕೊಂಡಿದ್ದಾರೆ. ಸ್ವತಃ ಅವರೇ ವಿತರಕರಾದ ಜಯಣ್ಣ ಮತ್ತು ಭೋಗೇಂದ್ರ ಅವರಿಗೆ ಕರೆ ಮಾಡಿ, ಚಿತ್ರವನ್ನು ವಿತರಿಸುವಂತೆ ಹೇಳಿದ್ದಾರೆ. ಇದೇ ಮೇ 25ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕರ್ನಾಟಕದ ಜತೆಗೆ ಏಕಕಾಲದಲ್ಲಿ ಪಕ್ಕದ ರಾಜ್ಯ ಹಾಗೂ ದೇಶದಲ್ಲೂ ತೆರೆಕಾಣಿಸುವ ಆಲೋಚನೆ ನಿರ್ಮಾಪಕರಾದ ಸುದರ್ಶನ್, ರಾಮಮೂರ್ತಿ ಹಾಗೂ ಹರೀಶ್ ಶೇರಿಗಾರ್ ಅವರದಾಗಿದೆ ಎಂದು ನಿರ್ದೇಶಕ ನರೇಂದ್ರಬಾಬು ವಿವರಿಸಿದರು.

See also  ಅಕ್ಷಯ್ ಕುಮಾರ್ ಕೊರೊನಾ ಸೋಂಕು ದೃಢ

ರಂಗಿತರಂಗ ಚಿತ್ರದ ಯಶಸ್ವಿ ನಾಯಕಿ ರಾಧೀಕ ಚೇತನ್ ಅವರು ಮಾತನಾಡಿ, ಚಿತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಹಿರಿಯ ನಟ ಅನಂತ್ ನಾಗ್ ಅವರ ಜೊತೆ ಅಭಿನಯಿಸಲು ಅವಕಾಶ ಲಭಿಸಿರುವುದು ನನ್ನ ಭಾಗ್ಯ, ಅವರಿಂದ ಸಾಕಷ್ಟು ಕಲಿತೆ. ಮಾತ್ರವಲ್ಲದೇ ಚಿತ್ರ ತಂಡದ ಎಲ್ಲಾ ಸದಸ್ಯರು ಒಂದು ಕುಟುಂಬದಂತೆ ಕಾರ್ಯ ನಿರ್ವಾಹಿಸುತ್ತಿದ್ದರು. ಚಿತ್ರದ ನಿರ್ದೇಶಕರು ಹಾಗೂ ನಿರ್ಮಾಪರು ನಮಗೆ ಉತ್ತಮ ರೀತಿಯಲ್ಲಿ ಪ್ರೋತ್ಸಾಹ ನೀಡಿದರು ಎಂದರು.

ಚಿತ್ರದ ಮತ್ತೊಂದು ವಿಶೇಷ ಎಂದರೆ ಈ ಚಿತ್ರಕ್ಕಾಗಿ ಜಗತ್ತಿನ ಅತ್ಯಂತ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾದಲ್ಲಿ ಚಿತ್ರೀಕರಣ ಮಾಡಲಾಗಿರುವುದು. ಈವರೆಗೂ ಕನ್ನಡದ ಯಾವುದೇ ಸಿನೆಮಾ ಇಲ್ಲಿ ಚಿತ್ರೀಕರಣವಾಗಿಲ್ಲ. ಹಾಗೆ ಚಿತ್ರೀಕರಣ ಮಾಡಿದ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಯನ್ನು “ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಚಿತ್ರ ಮುಡಿಗೇರಿಸಿಕೊಂಡಿದೆ. ಈ ಚಿತ್ರ ಅತ್ಯಂತ ಯಶಸ್ಸು ಕಾಣುವುದರಲ್ಲಿ ಯಾವುದೇ ಸಂಶಯವಿಲ್ಲ. ಎಲ್ಲರೂ ಈ ಚಿತ್ರವನ್ನು ನೋಡಿ ಕನ್ನಡ ಚಿತ್ರವನ್ನು ಪ್ರೋತ್ಸಾಹಿಸಿ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಹರೀಶ್ ಶೇರಿಗಾರ್ ಅವರ ಹಿರಿಯ ಸಹೋದರ ಪ್ರಕಾಶ್ ಶೇರಿಗಾರ್ ಉಪಸ್ಥಿತರಿದ್ದರು. 

ಚಿತ್ರಕ್ಕೆ ಸಂಗೀತ ನಿರ್ದೇಶನವನ್ನು ರಂಗಭೂಮಿ ಹಿನ್ನೆಲೆಯ ರಾಮಚಂದ್ರ ಹಡಪದ್ ಅವರು ನೀಡಿದ್ದು, ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ವಿಜಯ ಪ್ರಕಾಶ್, ಅರ್ಮಾನ್ ಮಲ್ಲಿಕ್, ವರ್ಷ, ವಾಣಿ ಸತೀಶ್, ಶ್ವೇತ ಪ್ರಭು ಹಾಡುಗಳಿಗೆ ಧ್ವನಿಯಾಗಿದ್ದಾರೆ. ವಿನಾಯಕರಾಮ್ ಕಲಗಾರು, ನರೇಂದ್ರ ಬಾಬು ಸಾಹಿತ್ಯ ಬರೆದಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು