News Kannada
Tuesday, October 04 2022

ಮನರಂಜನೆ

ಮೈಸೂರಿನಲ್ಲಿ ಬಟರ್ ಫ್ಲೈಗೆ ಭರದ ಚಿತ್ರೀಕರಣ - 1 min read

Photo Credit :

ಮೈಸೂರಿನಲ್ಲಿ ಬಟರ್ ಫ್ಲೈಗೆ ಭರದ ಚಿತ್ರೀಕರಣ

ಬಾಲಿವುಡ್ ನ ಕ್ವೀನ್ ಚಿತ್ರದ ಅವತರಣಿಕೆ ಬಟರ್ ಫ್ಲೈ ಚಿತ್ರೀಕರಣ ಮೈಸೂರಿನಲ್ಲಿ ಭರದಿಂದ ಸಾಗಿದೆ. ಈ ಚಿತ್ರವನ್ನು ನಟ ರಮೇಶ್ ಅರವಿಂದ್ ನಿರ್ದೇಶಿಸುತ್ತಿದ್ದು, ಏಕಕಾಲದಲ್ಲಿ ಕನ್ನಡ, ತಮಿಳು ಮಾತ್ರವಲ್ಲದೆ ತೆಲುಗಿನಲ್ಲೂ ಈ ಚಿತ್ರ ತಯಾರಿ ನಡೆಯುತ್ತಿದೆ.

ತಮಿಳಿನಲ್ಲಿ ತಮನ್ನಾ ಭಾಟಿಯಾ ನಾಯಕಿಯಾಗಿ ನಟಿಸುತ್ತಿದ್ದರೆ, ಮನು ಕುಮಾರನ್ ಈ ಚಿತ್ರಗಳ ನಿರ್ಮಾಪಕರಾಗಿದ್ದಾರೆ.

ಚಿತ್ರದ ಚಿತ್ರೀಕರಣ ಈಗಾಗಲೇ ಹಲವೆಡೆ ನಡೆದಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನ ಹಲವೆಡೆ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರತಂಡ ಹೇಳುವಂತೆ ಬಟರ್ ಫ್ಲೈ ಚಿತ್ರದ ಚಿತ್ರೀಕರಣ ಈಗಾಗಲೇ ಶೇ.90 ಭಾಗ ಮುಕ್ತಾಯಗೊಂಡಿದೆಯಂತೆ. ತಮಿಳು ಹಾಗೂ ತೆಲುಗು ಭಾಷೆಯ ಚಿತ್ರೀಕರಣ ಮಾತ್ರ ಇನ್ನೂ ನಡೆಯುತ್ತಿದೆ.

ಚಿತ್ರಗಳಿಗೆ ಅಮಿತ್ ತ್ರಿವೇದಿ ಸಂಗೀತ ನೀಡಿದ್ದು, ಸತ್ಯಹೆಗಡೆ ಅವರ ಛಾಯಾಗ್ರಹಣದಲ್ಲಿ ಕನ್ನಡ ಮತ್ತು ತಮಿಳು ಚಿತ್ರದ ಚಿತ್ರೀಕರಣ ನಡೆಯುತ್ತಿದೆ.

ಮೈಸೂರಿನಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಈಗಾಗಲೇ ಚಿತ್ರೀಕರಣ ನಡೆದಿದ್ದು, ಸದ್ಯ ಲಲಿತಮಹಲ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ.

ಚಿತ್ರದ ಕುರಿತಂತೆ ಮಾತನಾಡಿರುವ ನಿರ್ದೇಶಕ ರಮೇಶ್ ಅರವಿಂದ್, ಈ ಚಿತ್ರದಲ್ಲಿ ಒಂದೇ ಪಾತ್ರವನ್ನು ಬೇರೆ ಬೇರೆ ನಾಯಕಿಯರು ಅಭಿನಯಿಸಿದ್ದಾರೆ. ಹೀಗಾಗಿ ನಾಲ್ಕು ಭಾಷೆಯ ಚಿತ್ರಗಳು ಬೇರೆ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ ಎಂಬ ಅನುಭವವವಾಗುತ್ತಿದೆ. ನಟಿಯರಾದ ಪರೂಲ್ ಹಾಗೂ ಕಾಜಲ್ ಅಗರ್ವಾಲ್ ಅವರು ಉತ್ತಮವಾಗಿ ಅಭಿನಯಿಸಿದ್ದಾರೆ. ಮುಂದಿನ ಸೆಪ್ಟೆಂಬರ್ ಅಥವಾ ಅಕ್ಟೋಬರ್ ವೇಳೆಗೆ ಚಿತ್ರ ಬಿಡುಗಡೆ ಆಗಲಿದೆ ಎಂದು ಹೇಳಿದ್ದಾರೆ. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದೆ ಎಂದು ನಟಿ ಕಾಜಲ್ ಅಗರ್ವಾಲ್ ತಿಳಿಸಿದ್ದಾರೆ.

See also  ಕೋರ್ಟಿಗೆ ಹಾಜರಾದ ರಕ್ಷಿತ್ ಶೆಟ್ಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು