ಬೆಂಗಳೂರು: ಜಿಮ್ ತರಬೇತುದಾರ ಮಾರುತಿ ಗೌಡ ಅಪಹರಣ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟ ದುನಿಯಾ ವಿಜಯ್ ಹಾಗೂ ಸಹಚರರಿಗೆ ನಗರದ 70ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಸೋಮವಾರ ಆದೇಶವನ್ನು ಹೊರಡಿಸಿದೆ.
ಈ ಹಿಂದೆ ಕೆಲ ಹಂತದಲ್ಲಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರಿಂದ ವಿಜಯ್ ಹಾಗೂ ಅವರ ಸಹಚರರು ಸಿಸಿಎಚ್ ನ್ಯಾಯಾಲಯಕ್ಕೆ ಸರ್ಜಿಯನ್ನು ಸಲ್ಲಿಸಿದ್ದರು. ವಿಚಾರಣೆ ವೇಳೆ ನ್ಯಾಯಧೀಶರು, ‘ ನೀನು ಬೇರೆಯವರಿಗೆ ಮಾದರಿಯಾಗಬೇಕಾದ ವ್ಯಕ್ತಿ. ಹುಷರಾಗಿ ಹೆಜ್ಜೆಯಿಡಬೇಕು, ಮಾಧ್ಯಮಗಳಿವೆ’ ಎಂದು ಎಚ್ಚರಿಕೆಯನ್ನು ನೀಡಿದರು.
ನ್ಯಾಯಾಲಯದ ಆದೇಶ ಪ್ರತಿಯು ಸೋಮವಾರ ಸಂಜೆ ಪರಪ್ಪನ ಅಗ್ರಹಾರ ಸೇರಲಿದ್ದು ರಾತ್ರಿ ವೇಳೆ ದುನಿಯಾ ವಿಜಯ್ ಹಾಗೂ ಸಹಚರರು ಜೈಲಿನಿಂದ ಹೊರಗೆ ಬರುವ ಸಾಧ್ಯತೆಗಳಿವೆ ಎಂದು ಮೂಲಗಳಿಮದ ತಿಳಿದು ಬಂದಿದೆ.