ಮುಂಬೈ: ನಾನಾ ಪಾಟೇಕರ್ ಅವರು 2008ರಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿ ಓಶಿವಾರ ಪೊಲೀಸ್ ಠಾಣೆಯಲ್ಲಿ ನಟಿ ತನುಶ್ರೀ ದತ್ತಾ ದೂರು ದಾಖಲಿಸಿದ್ದಾರೆ.
ಹಾರ್ನ್ ಓಕೆ ಪ್ಲೀಸ್ ಸಿನಿಮಾದ ಹಾಡಿನ ಚಿತ್ರೀಕರಣದ ವೇಳೆ ನಾನಾ ಪಾಟೇಕರ್ ಅವರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಈ ಹಿಂದೆ ತನುಶ್ರೀ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದರು.
ಈ ವಿಚಾರಕ್ಕೆ ಸಂಬಂಧ ಭಾನುವಾರ ತನುಶ್ರೀ ಅವರು ಪೊಲೀಸರ ಬಳಿ ಹೇಳಿಕೆಯನ್ನು ನೀಡಿ ನಾನಾ ಪಾಟೇಕರ್ ಸೇರಿದಂತೆ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ, ನಿರ್ಮಾಪಕ ಸಮೀರ್ ಸಿದ್ಧಿಕಿ, ನಿರ್ದೇಶಕ ರಾಕೇಶ್ ಸಾರಂಗ್ ಅವರ ವಿರುದ್ಧ ದೂರನ್ನು ನೀಡಿದ್ದಾರೆ.