ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಿರ್ದೇಶಕ ಎಂ.ಎಸ್.ರಾಜಶೇಖರ್(75) ಅವರು ಸೋಮವಾರ ಬೆಂಗಳೂರಿನಲ್ಲಿ ನಿಧನರಾದರು.
ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು 1985ರಲ್ಲಿ ರಾಜ್ ಕುಮಾರ್ ಅಭಿನಯದ ಧ್ರುವತಾರೆ ಸಿನಿಮಾ ಮೂಲಕ ನಿರ್ದೇಶಕರಾಗಿದ್ದರು.
ರಥಸಪ್ತಮಿ, ನಂಜುಂಡಿ ಕಲ್ಯಾಣ, ಹೃದಯ ಹಾಡಿತು ಹೀಗೆ ಸುಮಾರು 35ಕ್ಕೂ ಹೆಚ್ಚು ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು.
ಇವರು ಪತ್ನಿ ರಾಣಿ, ಮಗಳು ಶಾರದಾ, ಮಗ ರಘು ಅವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಮಂಗಳವಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ರವಿಚಂದ್ರನ್ ನಟನೆಯ ರವಿಶಾಸ್ತ್ರಿ ಸಿನಿಮಾ ಇವರು ನಿರ್ದೇಶಿಸಿದ ಕೊನೆಯ ಸಿನಿಮಾವಾಗಿದೆ.