News Kannada
Tuesday, November 29 2022

ಮನರಂಜನೆ

ನಟ ದರ್ಶನ್ ಕಾರು ಅಪಘಾತ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ - 1 min read

Photo Credit :

ನಟ ದರ್ಶನ್ ಕಾರು ಅಪಘಾತ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಪೊಲೀಸರು ಅಪಘಾತದ ಮಾಹಿತಿಯನ್ನು ಚಾರ್ಜ್ ಶೀಟ್ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಸೆ.23ರಂದು ದರ್ಶನ್ ಕಾರು ಅಪಘಾತಕ್ಕಿಡಾಗಿದೆ. ಆ ಕಾರನ್ನು ಅವರ ಗೆಳೆಯ ಆಂಟೋನಿ ರಾಯ್ ಚಾಲನೆ ಮಾಡುತ್ತಿದ್ದರು. ರಿಂಗ್ ರಸ್ತೆಯ ಜಂಕ್ಷನ್ ಬಳಿ ರಾಯ್ ಅವರ ನಿರ್ಲಕ್ಷ್ಯತನದಿಂದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ನಂತರ ಕಾರಿನಲ್ಲಿದ್ದ 5 ಮಂದಿಗೆ ಗಾಯಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಸಮಯದಲ್ಲಿ ನಟ ದರ್ಶನ್ ಅವರಿಗೆ ಸಹಾಯ ಮಾಡಲು ಬಂದ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಅವರಿಗೂ ಗಾಯಗಳಾಗಿದೆ. ಅವರೂ ಸಹ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕಾರನ್ನು ಸರ್ಕಾರಿ ಆರ್ ಟಿಓ ಅಧಿಕಾರಿಗಳು ಪರಿಶೀಲಿಸಿದ್ದು ಯಾವುದೇ ತಾಂತ್ರಿಕ ಕಾರಣದಿಂದ ಅಪಘಾತ ಆಗಿಲ್ಲ ಎಂದು ವರದಿ ನೀಡಿದ್ದಾರೆ.

ಘಟನೆ ಸಂಬಂಧ ನಟರಾದ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಚಾಲಕ ಆಂಟೋನಿ, ಕಾರಿನಲ್ಲಿದ್ದ ಪ್ರಕಾಶ್ ಎಂಬವರ ಹೇಳಿಕೆ ಪಡೆಯಲಾಗಿದೆ. ಎಲ್ಲರ ಹೇಳಿಕೆಯಲ್ಲೂ ಆಂಟೋನಿಯವರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬ ಸಹಜ ಅಭಿಪ್ರಾಯ ಬಂದಿದೆ.

ತಪ್ಪಿತಸ್ಥ ಚಾಲಕ ಆಂಟೋನಿ ರಾಯ್ ವಿರುದ್ಧ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು ಎಂದು ವಿವಿಪುರಂ ಸಂಚಾರಿ ಠಾಣಾ ಪೊಲೀಸರು ಮನವಿ ಮಾಡಿದ್ದಾರೆ.

 

See also  ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆ ನೀಡಿದ ನಟಿ ಕರೀನಾ ಕಪೂರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು