ಬೆಂಗಳೂರು: ನಟ ಅಂಬರೀಷ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಕೊಂಡೊಯ್ಯಲು ವಾಯುಪಡೆಯ ವಿಮಾನ ಪಡೆಯಲು ಕೇಂದ್ರದಿಂದ ಅನುಮತಿ ದೊರಕಿದೆ.
ಈ ಹಿನ್ನೆಲೆ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗಿ ಸಾರ್ವಜನಿಕರ ದರ್ಶನಕ್ಕೆ ಇರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಮಂಡ್ಯ ಜನತೆಯ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಿಎಂ ಕುಮಾರಸ್ವಾಮಿ ಅವರು ವಾಯುಪಡೆಯ ವಿಮಾನಕ್ಕೆ ಅನುಮತಿ ಕೋರಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಜತೆ ಮಾತುಕತೆ ನಡೆಸಿದ್ದರು. ಇದೀಗ ಕೇಂದ್ರದಿಂದ ಅನುಮತಿ ದೊರಕಿದೆ.