News Kannada
Monday, December 05 2022

ಮನರಂಜನೆ

ಯಾವ ಪಕ್ಷದ ಪರವಾಗಿಯೂ ಪ್ರಚಾರ ಮಾಡಲ್ಲ: ಸಲ್ಮಾನ್ ಖಾನ್

Photo Credit :

ಯಾವ ಪಕ್ಷದ ಪರವಾಗಿಯೂ ಪ್ರಚಾರ ಮಾಡಲ್ಲ: ಸಲ್ಮಾನ್ ಖಾನ್

ಮುಂಬಯಿ: ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಮತ್ತು ಯಾವುದೇ ಪಕ್ಷದ ಪರವಾಗಿಯೂ ಪ್ರಚಾರ ಮಾಡುವುದಿಲ್ಲ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಸಲ್ಮಾನ್ ಚುನಾವಣೆಗೆ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ ಎಂದು ವರದಿಗಳು ಹೇಳಿದ್ದವು. ಇದರ ಬಗ್ಗೆ ಅವರು ಟ್ವಿಟ್ಟರ್ ನಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ.

ಇಂದೋರ್ ನಲ್ಲಿ ಕಾಂಗ್ರೆಸ್ ಪರವಾಗಿ ಸಲ್ಮಾನ್ ಪ್ರಚಾರ ಮಾಡಬೇಕೆಂದು ಅಲ್ಲಿನ ನಾಯಕರು ಬಯಸಿದ್ದರು. ಸಲ್ಮಾನ್ ಜತೆಗೆ ಮಾತುಕತೆ ನಡೆಸುತ್ತಿರುವುದಾಗಿ ಕಾಂಗ್ರೆಸ್ ನಾಯಕರು ಕೂಡ ಹೇಳಿದ್ದರು.

ಸಲ್ಮಾನ್ ಖಾನ್ ಅವರು ಇಂದೋರ್ ನಲ್ಲಿ ಜನಿಸಿದ್ದು, ಬಾಲ್ಯವನ್ನು ಅಲ್ಲೇ ಕಳೆದಿದ್ದರು ಎಂದು ಕಾಂಗ್ರೆಸ್ ನಾಯಕ ಪಂಕಜ್ ಚತುರ್ವೇದಿ ತಿಳಿಸಿದ್ದರು.

ಇಂದೋರ್ ನಲ್ಲಿ ಕಾಂಗ್ರೆಸ್ 1989ರ ಬಳಿಕ ಇದುವರೆಗೆ ಗೆಲ್ಲಲು ಸಾಧ್ಯವಾಗಿಲ್ಲ. ಇಂಧೋರ್ ನಿಂದ ಸುಮಿತ್ರಾ ಮಹಾಜನ್ ಅವರು ಎಂಟು ಸಲ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಅವರು ಈಗ ಲೋಕಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

See also  34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಸೋನಂ ಕಪೂರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು