ಬೆಂಗಳೂರು: ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಕೆಂಗೇರಿಯಲ್ಲಿರುವ ದರ್ಶನ್ ಮನೆ ಮೇಲೆ ಶನಿವಾರ ತಡರಾತ್ರಿ ದುಷ್ಕರ್ಮಿಯೊಬ್ಬ ಕಲ್ಲು ತೂರಾಟ ನಡೆಸಿದ್ದ.
ಈ ಸಂಬಂಧ ದರ್ಶನ್ ಮ್ಯಾನೇಜರ್ ಶ್ರೀನಿವಾಸ್ ಅವರು ಆರ್ ಆರ್ ನಗರದಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಈ ಘಟನೆ ನಡೆದಾಗ ದರ್ಶನ್ ಅವರು ಮನೆಯಲ್ಲಿ ಇರಲಿಲ್ಲ ಎಂದು ಉಲ್ಲೇಖಿಸಿದ್ದಾರೆ.