ಮುಂಬಯಿ: ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ನವಂಬರ್ 11ರಂದು ಉಸಿರಾಟದ ತೊಂದರೆಯಿಂದಾಗಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಆಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಲತಾ ಮಂಗೇಶ್ಕರ್ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಸುಧಾರಣೆ ಆಗುತ್ತಿದೆ. ಆದರೆ ಈಗಲೂ ಗಂಭೀರ ಸ್ಥಿತಿಯೇ ಮುಂದುವರಿದಿದೆ. ಮುಂದಿನ 7-10 ದಿನಗಳ ಕಾಲ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್ ಅವರಿಗೆ ಡಾ. ಪ್ರರೀಕ್ ಸಮಧಾನಿ ಅವರು ಚಿಕಿತ್ಸೆ ನೀಡುತ್ತಿದ್ದಾರೆ.