ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಐತಿಹಾಸಿಕ ಗಂಡುಗಲಿ ಮದಕರಿ ನಾಯಕ ಚಿತ್ರದ ಮುಹೂರ್ತ ಗುರುವಾರ ನೆರವೇರಿದೆ.
ಚಿತ್ರವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಪುರಾತನ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು ಮೊದಲ ಸೀನ್ ಗೆ ಚಾಲನೆ ನೀಡಲಾಗಿದೆ. ಈ ವೇಳೆ ನಟಿ, ಸಂಸದೆ ಸುಮಲತಾ ಅಂಬರೀಶ್, ನಟ ದೊಡ್ಡಣ್ಣ ಸೇರಿದಂತೆ ಹಿರಿಯ ಕಲಾವಿದರು ಭಾಗಿಯಾಗಿದ್ದರು.