ನವದೆಹಲಿ: ಮಾದಕ ದ್ರವ್ಯ ಮಾರಾಟ ಹಾಗೂ ಸಾಗಾಟದಲ್ಲಿ ಬಂಧನದಲ್ಲಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಸುಪ್ರೀಂಕೋರ್ಟ್ ರಾಗಿಣಿ ಜಾಮೀನು ವಿಚಾರಣೆಯನ್ನು ಡಿ.4ರಂದು ನಡೆಸಲಿದೆ. ನ.3ರಂದು ರಾಜ್ಯ ಹೈಕೋರ್ಟ್ ರಾಗಿಣಿಗೆ ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಬಾಗಿಲು ತಟ್ಟಿರುವರು.
ಮಾದಕ ದ್ರವ್ಯ ಮಾರಾಟ ಜಾಲದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಸೆ.4ರಂದು ರಾಗಿಣಿಯನ್ನು ಸಿಸಿಬಿ ಪೊಲಿಸರು ಬಂಧಿಸಿದ್ದರು.