ಮುಂಬಯಿ: ಉತ್ತರ ಪ್ರದೇಶದಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ನಟ ಅಕ್ಷಯ್ ಕುಮಾರ್ ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭೇಟಿ ಮಾಡಿದರು.
ಅಕ್ಷಯ್ ಕುಮಾರ್ ಅವರು ನಿನ್ನೆ ರಾತ್ರಿ ಟ್ರಿಡೆಂಟ್ ಹೋಟೆಲ್ ನಲ್ಲಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿರುವರು ಎಂದು ತಿಳಿದುಬಂದಿದೆ.
ಅಕ್ಷಯ್ ಕುಮಾರ್ ಅವರೊಂದಿಗೆ ಉತ್ತರ ಪ್ರದೇಶದಲ್ಲಿ ಫಿಲ್ಮ್ ಸಿಟಿ ನಿರ್ಮಾಣದ ಬಗ್ಗೆ ಕೆಲವು ವಿಚಾರಗಳನ್ನು ಚರ್ಚೆ ಮಾಡಿದರು. ಕೆಲವು ನಿರ್ದೇಶಕ ಹಾಗೂ ನಿರ್ಮಾಪಕರನ್ನು ಭೇಟಿ ಮಾಡಲಿರುವ ಆದಿತ್ಯನಾಥ್ ಅವರು ಫಿಲ್ಮ್ ಸಿಟಿ ಬಗ್ಗೆ ಸಲಹೆಗಳನ್ನು ಪಡೆಯಲಿರುವರು.
ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ ವೇಳೆ ಅಕ್ಷಯ್ ಕುಮಾರ್ ಅವರು ತಮ್ಮ ಮುಂದಿನ ಸಿನಿಮಾ ರಾಮ ಸೇತು ಬಗ್ಗೆ ಕೂಡ ವಿವರಿಸಿದರು ಎಂದು ತಿಳಿದುಬಂದಿದೆ.