ನವದೆಹಲಿ: ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕಾರವಾದ ನಂತರ ನಟಿ ರಾಗಿಣಿ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ್ದರು. ಆದರೆ ಇದೀಗ ಸುಪ್ರೀಂಕೋರ್ಟ್ ಅವರ ಅರ್ಜಿಯನ್ನು ಜನವರಿ ತಿಂಗಳಿಗೆ ಮುಂದೂಡಿಕೆ ಮಾಡಿದೆ.
ಸ್ಯಾಂಡಲ್ ವುಡ್ ಡ್ರಕ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಜಮೀನಿಗಾಗಿ ಪರದಾಡುತ್ತಿದ್ದಾರೆ. ಹೈಕೋರ್ಟ್ ನಲ್ಲಿ ನಟಿಯ ಜಾಮೀನು ಅರ್ಜಿ ತಿರಸ್ಕಾರವಾಗಿತ್ತು. ಅದಾದ ನಂತರ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದರು. ಸುಪ್ರೀಂಕೋರ್ಟ್ನಲ್ಲಿ ಅರ್ಜಿಯ ವಿಚಾರಣೆಯನ್ನು ಜನವರಿಗೆ ಮುಂದೂಡಲಾಗಿದೆ. ಇದರಿಂದಾಗಿ ನಟಿ ಈ ವರ್ಷ ಹೊರಗೆ ಬರುವ ಸಾಧ್ಯತೆ ಇಲ್ಲದಂತಾಗಿದೆ.
ಹೊಸವರ್ಷದ ಆರಂಭವನ್ನು ಜೈಲಿನ ಕಂಬಿಗಳ ಹಿಂದೆಯೇ ಕಳೆಯಬೇಕಾದ ಸ್ಥಿತಿ ರಾಗಿಣಿಯದಾಗಿದೆ.