ಚೆನ್ನೈ: ತಮಿಳುನಾಡಿನ ಸೀರಿಯಲ್ ನಟಿ ಚೈತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಾರಣ ಕೇಳಿದ್ರೆ ಶಾಕ್ ಆಗೋದು ನಿಜ.
ನಟಿ ಚೈತ್ರ ಆತ್ಮಹತ್ಯೆಗೆ ಪತಿ ಪ್ರಚೋದನೆ ನೀಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು ಚೈತ್ರಾ ಪತಿ ಹೇಮಂತ್ ನನ್ನು ಪೊಲೀಸರು ಬಂಧಿಸಿದ್ದಾರೆ.
29 ವರ್ಷದ ನಟಿ ಚೈತ್ರಾ ಡಿ.10ರಂದು ಚೆನ್ನೈ ಹೊರವಲಯದಲ್ಲಿರುವ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ನನ್ನ ಮಗಳಿಗೆ ಹೇಮಂತ್ ದೈಹಿಕ ಹಿಂಸೆ ನೀಡುತ್ತಿದ್ದ ಇದೇ ಕಾರಣಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಚೈತ್ರಾ ತಾಯಿ ಪೊಲೀಸರಿಗೆ ದೂರು ನೀಡಿದ್ದರು.
ನಟಿಯ ಆತ್ಮಹತ್ಯೆಗೆ ಆರ್ಥಿಕ ಸಂಕಷ್ಟ ಕಾರಣ ಎಂದು ಪೊಲೀಸರು ಪ್ರಾಥಮಿಕ ವರದಿಯಲ್ಲಿ ಹೇಳಿಕೆ ನೀಡಿದ್ದರು. ಆದರೆ ಇದೀಗ ಚೈತ್ರಾ ಪತಿ ಹೇಮಂತ್ ಬಂಧನದ ಬಳಿಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಚೈತ್ರಾ ಮತ್ತು ಹೇಮಂತ್ ಕೆಲ ತಿಂಗಳ ಹಿಂದಷ್ಟೆ ವಿವಾಹವಾಗಿದ್ದರು. ಚೈತ್ರಾ ಅವರು ಸೀರಿಯಲ್ ನಲ್ಲಿ ಕೆಲವು ದೃಶ್ಯಗಳಲ್ಲಿ ನಟಿಸಿದ್ದು ಹೇಮಂತ್ ಗೆ ಇಷ್ಟವಾಗಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ಹೇಮಂತ್ ಚೈತ್ರಾಗೆ ದೈಹಿಕ ಹಲ್ಲೆ ನಡೆಸಿದ್ದ ಎನ್ನಲಾಗಿದೆ.
ಕೆಲವು ದಿನಗಳ ವಿಚಾರಣೆ ಬಳಿಕ ಪೊಲೀಸರು ಹೇಮಂತ್ ರನ್ನು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯ ಸ್ನೇಹಿತರು ಮತ್ತು ಸಹೋದ್ಯೋಗಿಗಳನ್ನೂ ವಿಚಾರಣೆ ನಡೆಸಲಾಗುತ್ತಿದೆ.