ಮದಗಜ ಸಿನಿಮಾದ ಟೀಸರ್ ರಿಲೀಸ್ ಆಗಿ ಕೇವಲ ಐದು ಗಂಟೆ ಒಳಗೆ 7ಲಕ್ಷಕ್ಕೂ ಅಧಿಕ ವೀಕ್ಷಣೆಯಾಗಿದ್ದು, 50 ಸಾವಿರಕ್ಕೂ ಹೆಚ್ಚು ಲೈಫ್ ಗಳನ್ನು ಪಡೆದಿದೆ.
ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ಮದಗಜ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಟೀಸರ್ ಬಿಡುಗಡೆ ಮಾಡಿದರು.
ಅಯೋಗ್ಯ ಖ್ಯಾತಿಯ ಎಸ್ ಮಹೇಶ್ ಕುಮಾರ್ ಚಿತ್ರವನ್ನು ನಿರ್ದೇಶಿಸಲಿದ್ದು, ಉಮಾಪತಿ ಶ್ರೀನಿವಾಸಗೌಡ ಅವರ ನಿರ್ಮಾಣದಲ್ಲಿ ಮೂಡಿಬರಲಿದೆ. ನಾಯಕಿ ಆಶಿಕಾ ರಂಗನಾಥ್ ಚಿತ್ರದ ಮುಖ್ಯ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು,
ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ ಅವರು ಸಂಗೀತ ನಿರ್ದೇಶನ ಮಾಡಲಿದ್ದಾರೆ.