2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದ್ದು, ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ನಟರು ಈ ಬಾರಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಈ ಪ್ರಶಸ್ತಿ ದೊರೆತಿದೆ.
ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಚಲನಚಿತ್ರೋದ್ಯಮಗಳ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ನಡೆಯುವ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗ ಆಯ್ಕೆಯಾದವರ ಪಟ್ಟಿಯನ್ನು ಹೊಸವರ್ಷದಂದು ಬಿಡುಗಡೆ ಮಾಡಿದೆ.
2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಬಹುಮುಖ ನಟರು ಪ್ರಶಸ್ತಿ, ದಕ್ಷಿಣ ಭಾರತದ ಖ್ಯಾತ ನಟರಾದ ಅಜಿತ್ ಕುಮಾರ್, ಮೋಹನ್ ಲಾಲ್, ನಾಗಾರ್ಜುನ ಅಕ್ಕಿನೇನಿ ಹಾಗೂ ಶಿವರಾಜ್ ಕುಮಾರ್ ಅವರಿಗೆ ದೊರೆತಿದೆ.
ಅಷ್ಟೇ ಅಲ್ಲದೆ ಕನ್ನಡದ ಅತ್ಯುತ್ತಮ ನಟ ಪ್ರಶಸ್ತಿಗೆ ರಕ್ಷಿತ್ ಶೆಟ್ಟಿ ಬಜನ ರಾಗಿದ್ದು, ಅವರ ಅವನೇ ಶ್ರೀಮನ್ನಾರಾಯಣ ಚಿತ್ರದ ಅಭಿನಯಕ್ಕೆ ಈ ಪ್ರಶಸ್ತಿ ದೊರೆತಿದೆ. ಈ ಬಾರಿಯ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಮೂಕಜ್ಜಿಯ ಕನಸುಗಳು ಸಿನಿಮಾ ಪಡೆದುಕೊಂಡಿದೆ. ಅಂತೆಯೇ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪ್ರೀಮಿಯರ್ ಪದ್ಮಿನಿ ಚಿತ್ರದ ನಿರ್ದೇಶಕ ರಮೇಶ್ ಇಂದಿರಾ ಸ್ವೀಕರಿಸಿದ್ದಾರೆ.