ಮುಂಬೈ: ಸಮಾಜ ಸೇವೆ ಹಾಗೂ ಬಡವರ ಸಂಕಷ್ಟ ನಿವಾರಕ ಎಂದು ಎಲ್ಲರಿಂದ ಮೆಚ್ಚುಗೆ ಪಡೆದಿರುವ ಸೋನು ಸೂದ್ ವಿರುದ್ಧ ಅಕ್ರಮವಾಗಿ ಕಟ್ಟಡವನ್ನು ಹೋಟೆಲ್ ಆಗಿ ಪರಿವರ್ತಿಸಿರುವ ಆರೋಪದ ಮೇಲೆ ದೂರು ದಾಖಲಿಸಲಾಗಿದೆ.
ಮುಂಬೈ ನಗರಪಾಲಿಕೆಯಲ್ಲಿ ಈ ಸಂಬಂಧ ದೂರು ದಾಖಲಿಸಲಾಗಿದ್ದು, ಜುಹೂವಿನಲ್ಲಿರುವ ಆರು ಅಂತಸ್ತಿನ ಕಟ್ಟಡವನ್ನು ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಹೋಟೆಲ್ ಆಗಿ ಪರಿವರ್ತಿಸಿದ್ದಾರೆ ಎಂದು ಮುಂಬೈ ಮಹಾನಗರ ಪಾಲಿಕೆ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.