News Kannada
Monday, February 06 2023

ಮನರಂಜನೆ

ಹೊಸ ಚಿತ್ರ ‘ಕಾದಾಡಿ’ಗೆ ಅಕ್ಷಿತ್ ಶಶಿಕುಮಾರ್ ಹೀರೋ

Photo Credit : By Author

ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಳ್ಳುತ್ತಿರುವ ‘ಕಾದಾಡಿ’ ಸಿನಿಮಾದ ಹೀರೋ ಆಗಿ ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಅಕ್ಷಿತ್‌ಶಶಿಕುಮಾರ್ ನಟಿಸುತ್ತಿದ್ದು, ಸಿನಿಮಾ ರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಈ ಚಿತ್ರವನ್ನು ಸತೀಶ್ ಮಲೇಮ್‌ಪಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡುತ್ತಿದ್ದು, ಛಾಯಾಗ್ರಹಣ ಡಿ.ಯೋಗಿಪ್ರಸಾದ್, ಕಲೆ ಅರ್ಜುನ್‌ಸೂರಿಸೆಟ್ಟಿ, ಸಂಕಲನ ಪ್ರಕಾಶ್‌ತೋಟ, ನೃತ್ಯ ರಾಜ್‌ಪಿಡಿ-ರಾಜ್‌ಕೃಷ್ಣ, ಸಾಹಸ ಬಿ.ಎಲ್.ಸತೀಶ್-ವಿನ್‌ಚೇನ್ ಆಂಜಿ-ಬಿಂಬಸಾರ ರಾಮಕೃಷ್ಣ-ರಾಮಸುಂಕರ ಅವರದ್ದಾಗಿದೆ.

ತ್ಯಾಗಮಯವಾಗುತ್ತಿರುವ ಜನರ ಜೀವನವು ದಿನದ ಅಂತ್ಯದಲ್ಲಿ ಪ್ರತಿಯೊಬ್ಬರು ತ್ಯಾಗಮಯಿರಾಗುತ್ತಾರೆ. ನಾವೆಲ್ಲರೂ ಕಾದಾಡುತ್ತಾ ಒಂದು ದಿನ ಸಾಯುತ್ತೇವೆ. ಆದರೆ ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನಾನ್ನಾದರೂ ಕೊಡಬೇಕು. ಮಕ್ಕಳಿಗೆ ಏನಾದರೂ ಆಗಬೇಕು. ನಾವು ದಿನದಿಂದ ದಿನಕ್ಕೆ ಹೋರಾಟ ನಡೆಸುತ್ತಿದ್ದೇವೆ. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನವನ್ನು ಮಾಡಲಾಗಿದೆ.

ಇನ್ನು ಹೀರೋ ಅಕ್ಷಿತ್‌ಶಶಿಕುಮಾರ್ ಗೆ ಲಾವಣ್ಯಸಾಹುಕಾರ, ಚಾಂದಿನಿತಮಿಳರಸನ್ ನಾಯಕಿಯರಾಗಿದ್ದಾರೆ. ಉಳಿದಂತೆ ತಾರಾಗಣದಲ್ಲಿ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ ಮನೋಹರ್, ಶ್ರವಣ್‌ ರಾಘವೇಂದ್ರ ಮುಂತಾದವರು ಇದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಿ, ಐಟಂ ಹಾಡನ್ನು ಸದ್ಯದಲ್ಲೆ ಮುಗಿಸಲು ತಂಡವು ಯೋಜನೆ ರೂಪಿಸಿಕೊಂಡಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

See also  ಬಾಲಿವುಡ್ ಖ್ಯಾತ ನಟ ಅಮೀರ್ ಖಾನ್ ಗೆ ಕೊರೊನಾ ಸೋಂಕು ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು