ಉಸಿರಾಟದ ತೊಂದರೆ: ಸಂಸದೆ ನುಸ್ರತ್ ಜಹಾನ್ ಆಸ್ಪತ್ರೆಗೆ ದಾಖಲು

ಉಸಿರಾಟದ ತೊಂದರೆ: ಸಂಸದೆ ನುಸ್ರತ್ ಜಹಾನ್ ಆಸ್ಪತ್ರೆಗೆ ದಾಖಲು

YK   ¦    Nov 18, 2019 03:39:09 PM (IST)
ಉಸಿರಾಟದ ತೊಂದರೆ: ಸಂಸದೆ ನುಸ್ರತ್ ಜಹಾನ್ ಆಸ್ಪತ್ರೆಗೆ ದಾಖಲು

ನವದೆಹಲಿ: ತೃಣಮೂಲ ಕಾಂಗ್ರೆಸ್ ನಿಂದ ಟಿಕೆಟ್ ಪಡೆದು ಬಸಿರ್ಹತ್ ಕ್ಷೇತ್ರದಿಂದ ಆಯ್ಕೆಯಾಗಿರುವ ನಟಿ ನುಸ್ರತ್ ಜಹಾನ್ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೊದಲಿನಿಂದಲೂ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದಿಲ್ಲೊಂದು ಕಾರಣಗಳಿಗಾಗಿ ಸುದ್ದಿಯಾಗುತ್ತಲೇ ಇದ್ದ ನುಸ್ರತ್ ಜಹಾನ್ ಅವರು ಪ್ರಮಾಣ ವಚನ ಸಮಾರಂಭಕ್ಕೆ ಇಸ್ಲಾಮಿಕ್ ಅಲ್ಲದೆ ರೀತಿಯಲ್ಲಿ ಉಡುಗೆ ಧರಿಸಿದ್ದರು. ಇದಕ್ಕೆ ಮುಸ್ಲಿಂ ನಾಯಕರು ವಿರೋಧ ವ್ಯಕ್ತಪಡಿಸಿದ್ದರು.

ಅನಾರೋಗ್ಯದಿಂದ ಮೊದಲ ಬಾರಿ ನುಸ್ರತ್ ಅವರು ಇಂದು ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗಿಲ್ಲ.