ಸುಶಾಂತ್ ಸಾವಿನ ಪ್ರಕರಣ: 30 ಸಾವಿರ ಪುಟಗಳಷ್ಟಿರುವ ಚಾರ್ಜ್ ಶೀಟ್ ಸಲ್ಲಿಕೆ

ಸುಶಾಂತ್ ಸಾವಿನ ಪ್ರಕರಣ: 30 ಸಾವಿರ ಪುಟಗಳಷ್ಟಿರುವ ಚಾರ್ಜ್ ಶೀಟ್ ಸಲ್ಲಿಕೆ

MS   ¦    Mar 05, 2021 07:04:34 PM (IST)
ಸುಶಾಂತ್ ಸಾವಿನ ಪ್ರಕರಣ: 30 ಸಾವಿರ ಪುಟಗಳಷ್ಟಿರುವ ಚಾರ್ಜ್ ಶೀಟ್ ಸಲ್ಲಿಕೆ

ಮುಂಬೈ: ಸುಮಾರು 30 ಸಾವಿರ ಪುಟಗಳಷ್ಟಿರುವ ಚಾರ್ಜ್ ಶೀಟನ್ನು, ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ತಳುಕು ಹಾಕಿಕೊಂಡಿದ್ದ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ಇಂದು ಸಲ್ಲಿಕೆ ಮಾಡಲಿದ್ದಾರೆ.

ಎನ್ ಸಿಬಿ ಮುಖ್ಯಸ್ಥ ಸಮೀರ್ ವಾಂಖೆಡೆ ಸ್ವತಃ ಸಲ್ಲಿಕೆ ಮಾಡಲಿದ್ದು,ಚಾರ್ಜ್ ಶೀಟ್ ನಲ್ಲಿ ಎನ್ ಸಿಬಿಯು ಒಟ್ಟು 33 ಜನರ ಹೆಸರನ್ನು ಸೇರಿಸಲಾಗಿದೆ. ಈ ಪ್ರಕರಣ ದೇಶದಲ್ಲಿ ಭಾರಿ ಸುದ್ದಿ ಮಾಡಿತ್ತು. ಅದರಲ್ಲಿ ಮುಖ್ಯವಾಗಿ ಸುಶಾಂತ್ ಸಿಂಗ್ ಅವರ ಪ್ರೇಯಸಿ ರಿಯಾ ಚಕ್ರವರ್ತಿ ಸೇರಿದಂತೆ ಹಲವಾರು ಮಂದಿಯನ್ನು, ಡ್ರಗ್ ಪೆಡ್ಲರ್ ಗಳನ್ನು ಎನ್ ಸಿಬಿಯು ಬಂಧಿಸಿತ್ತು.