ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

HSA   ¦    Sep 15, 2020 03:19:07 PM (IST)
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ: ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲವು ಹಬ್ಬಿರುವ ತನಿಖೆ ನಡೆಸುತ್ತಿರುವ ಸಿಸಿಬಿಯು ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೈಗೆ ನೋಟಿಸ್ ಜಾರಿ ಮಾಡಿದೆ.

ಸೆ.16ರಂದು ಬೆಳಗ್ಗೆ ಸಿಸಿಬಿಗೆ ಕಚೇರಿಗೆ ಬೆಳಗ್ಗೆ 11 ಗಂಟೆಗೆ ಹಾಜರಾಗಬೇಕು ಎಂದು ನೋಟಿಸ್ ನಲ್ಲಿ ಹೇಳಿದೆ.

ಇಬ್ಬರಿಗೂ ನೋಟಿಸ್ ನೀಡಲಾಗಿದೆ. ಮೊದಲು ಅವರನ್ನು ವಿಚಾರಣೆ ಮಾಡಿದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಸಿಬಿಯ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದರು.

ಈಗಾಗಲೇ ನಟಿ ರಾಗಿಣಿ ಹಾಗೂ ಸಂಜನಾ ಡ್ರಗ್ಸ್ ಜಾಲದಲ್ಲಿ ಇರುವುದರ ಬಗ್ಗೆ ಸಾಕ್ಷ್ಯಗಳು ಸಿಕ್ಕಿದೆ.