ಸುಶಾಂತ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ರೂಪಾ ಗಂಗೂಲಿ ಒತ್ತಾಯ

ಸುಶಾಂತ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ರೂಪಾ ಗಂಗೂಲಿ ಒತ್ತಾಯ

HSA   ¦    Jun 26, 2020 03:24:29 PM (IST)
ಸುಶಾಂತ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ರೂಪಾ ಗಂಗೂಲಿ ಒತ್ತಾಯ

ಕೊಲ್ಕತ್ತಾ: ಪ್ರತಿಭಾನ್ವಿತ ನಟ ಸುಶಾಂತ್ ಸಿಂಗ್ ರಾಜಪುತ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಆಗಬೇಕು ಎಂದು ಹಿರಿಯ ನಟಿ ಮತ್ತು ಬಿಜೆಪಿ ಸಂಸದೆ ರೂಪಾ ಗಂಗೂಲಿ ಅವರು ಒತ್ತಾಯಿಸಿದ್ದಾರೆ.

ಸುಶಾಂತ್ ಸಿಂಗ್ ತುಂಬಾ ಧನಾತ್ಮಕ ವ್ಯಕ್ತಿಯಾಗಿದ್ದರು ಮತ್ತು ಅವರ ಆತ್ಮಹತ್ಯೆ ಬಗ್ಗೆ ನಡೆಯುತ್ತಿರುವ ತನಿಖೆ ಸರಿಯಾದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಹೇಳಿರುವರು.

ರೂಪಾ ಗಂಗೂಲಿ ಅವರು ಸರಣಿ ಟ್ವೀಟ್ ಮೂಲಕ ಈ ಬಗ್ಗೆ ಮನವಿ ಮಾಡಿಕೊಂಡಿರುವರು. ಇದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಟ್ಯಾಗ್ ಮಾಡಿರುವರು.

ಮರಣೋತ್ತರ ಪರೀಕ್ಷೆಯಲ್ಲಿ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಆದರೆ ಇದರಲ್ಲಿ ಏನೋ ಮೋಸವಿದೆ ಎಂದು ಟ್ವೀಟ್ ಮಾಡಿರುವರು.