ಗಾನ ಕೋಗಿಲೆ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು

ಗಾನ ಕೋಗಿಲೆ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು

HSA   ¦    Nov 11, 2019 05:19:41 PM (IST)
ಗಾನ ಕೋಗಿಲೆ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು

ಮುಂಬಯಿ: ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರನ್ನು ಸೋಮವಾರ ನಗರದ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ಹೇಳಿವೆ.

ಇಂದು ಮಧ್ಯಾಹ್ನ 1.30ರ ವೇಳೆಗೆ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಹಿರಿಯ ವೈದ್ಯಕೀಯ ಸಲಹೆಗಾರ ಫಾರೂಖ್ ಎ ಉದ್ವಾಡಿಯಾ ಅವರು ಚಿಕಿತ್ಸೆ ನೀಡುತ್ತಿರುವರು.

ಲತಾ ಮಂಗೇಶ್ಕರ್ ಅವರು ಸಪ್ಟೆಂಬರ್ 28ರಂದು ತನ್ನ 90ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.