News Kannada
Friday, February 23 2024
ಮನರಂಜನೆ

ಮೊದಲ ದಿನವೇ 61 ಕೋಟಿ ರೂ. ಬಾಚಿದ ʼಅನಿಮಲ್‌ʼ

61 crore on the first day itself. Combed 'Animal'
Photo Credit : News Kannada

ಮುಂಬೈ: ರಿಲೀಸ್‌ ಗೆ ಮೊದಲೇ ಸಾಕಷ್ಟು ಕುತೂಹಲ ಕೆರಳಿಸಿದ್ದ ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಸಿನಿಮಾ ಬ್ಲಾಕ್​ಬಸ್ಟರ್ ಹಿಟ್ ಆಗುವ ಸೂಚನೆ ಸಿಕ್ಕಿದೆ.

ಡಿಸೆಂಬರ್ 1ರಂದು ರಿಲೀಸ್ ಆದ ಈ ಸಿನಿಮಾ ಮೊದಲ ದಿನ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ಅವರ ವೃತ್ತಿ ಜೀವನದಲ್ಲೇ ಮೊದಲ ದಿನ ಇಷ್ಟು ದೊಡ್ಡ ಗಳಿಕೆ ಆಗಿದ್ದು ಇದೇ ಮೊದಲು. ಮುಂದಿನ ದಿನಗಳಲ್ಲಿ ಸಿನಿಮಾ ಅಬ್ಬರದ ಗಳಿಕೆ ಮಾಡುವ ಸಾಧ್ಯತೆ ಇದೆ.

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಹಿಂದಿ, ತೆಲುಗು, ಕನ್ನಡ ಸೇರಿ ಐದು ಭಾಷೆಗಳಲ್ಲಿ ರಿಲೀಸ್ ಆಗಿದೆ. ಆರಂಭಿಕ ವರದಿಗಳ ಪ್ರಕಾರ ಈ ಚಿತ್ರ ಹಿಂದಿಯಲ್ಲಿ 50.50 ಕೋಟಿ ರೂಪಾಯಿ ಬಾಚಿಕೊಂಡಿದೆ. ತೆಲುಗು ವರ್ಷನ್​ನಿಂದ 10 ಕೋಟಿ ರೂಪಾಯಿ ಆಗಿದೆ. ಉಳಿದ ಭಾಷೆಗಳಿಂದ 50 ಲಕ್ಷ ರೂಪಾಯಿ ಗಳಿಕೆ ಆಗಿದೆ. ‘ಅನಿಮಲ್’ ಸಿನಿಮಾಗೆ ಸಂದೀಪ್ ರೆಡ್ಡಿ ವಂಗ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಣಬೀರ್, ರಶ್ಮಿಕಾ ಮಂದಣ್ಣ, ಬಾಬಿ ಡಿಯೋಲ್ ನಟಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು