ಹೆಣ್ಣು ಮಗುವಿಗೆ ಜನ್ಮವಿತ್ತ ಅನುಷ್ಕ ಶರ್ಮ

ಹೆಣ್ಣು ಮಗುವಿಗೆ ಜನ್ಮವಿತ್ತ ಅನುಷ್ಕ ಶರ್ಮ

MS   ¦    Jan 11, 2021 04:29:13 PM (IST)
ಹೆಣ್ಣು ಮಗುವಿಗೆ ಜನ್ಮವಿತ್ತ ಅನುಷ್ಕ ಶರ್ಮ

ಬಾಲಿವುಡ್ ಖ್ಯಾತ ನಟಿ ಅನುಷ್ಕ ಶರ್ಮ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವಿರಾಟ್ ಕೊಹ್ಲಿ ಹಂಚಿಕೊಂಡಿದ್ದಾರೆ.

"ಈ ಮಧ್ಯಾಹ್ನ ನಮಗೆ ಹೆಣ್ಣು ಮಗು ಆಗಿದೆ ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ನಾವು ರೋಮಾಂಚನಗೊಂಡಿದ್ದೇವೆ. ನಿಮ್ಮ ಪ್ರೀತಿ, ಪ್ರಾರ್ಥನೆ ಮತ್ತು ಶುಭಾಶಯಗಳಿಗಾಗಿ ನಾವು ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇವೆ. ಅನುಷ್ಕಾ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಮತ್ತು ನಮ್ಮ ಜೀವನದ ಈ ಅಧ್ಯಾಯವನ್ನು ಪ್ರಾರಂಭಿಸಲು ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತೆವೆ. ಈ ಸಮಯದಲ್ಲಿ ನೀವು ನಮ್ಮ ಗೌಪ್ಯತೆಯನ್ನು ಗೌರವಿಸಬಹುದು ಎಂದು ನಾವು ಭಾವಿಸುತ್ತೇವೆ." ಎಂದು ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.