ಲಾಕ್ ಡೌನ್ ಉಲ್ಲಂಘಿಸಿದ ಪೂನಂ ಪಾಂಡೆ ವಿರುದ್ಧ ಪ್ರಕರಣ ದಾಖಲು

ಲಾಕ್ ಡೌನ್ ಉಲ್ಲಂಘಿಸಿದ ಪೂನಂ ಪಾಂಡೆ ವಿರುದ್ಧ ಪ್ರಕರಣ ದಾಖಲು

HSA   ¦    May 11, 2020 04:47:55 PM (IST)
ಲಾಕ್ ಡೌನ್ ಉಲ್ಲಂಘಿಸಿದ ಪೂನಂ ಪಾಂಡೆ ವಿರುದ್ಧ ಪ್ರಕರಣ ದಾಖಲು

ಮುಂಬಯಿ: ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದ ನಟಿ ಹಾಗೂ ರೂಪದರ್ಶಿ ಪೂನಂ ಪಾಂಡೆ ವಿರುದ್ಧ ಮುಂಬಯಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೂನಂ ಪಾಂಡೆ ಮತ್ತು ಆಕೆಯ ಜತೆಗಿದ್ದ ಮತ್ತೊಬ್ಬ ವ್ಯಕ್ತಿಯ ಮೇಲೆ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಮುಂಬಯಿ ಪೊಲೀಸರು ತಿಳಿಸಿದ್ದಾರೆ.

ಮರೀನ್ ಡ್ರೈವ್ ನಲ್ಲಿ ಪೂನಂ ಪಾಂಡೆ ವಿನಾಕಾರಣ ತನ್ನ ಐಷಾರಾಮಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆಕೆಯನ್ನು ಪೊಲೀಸರು ತಡೆದಿದ್ದಾರೆ. ಪೂನಂ ಪಾಂಡೆ ಮತ್ತು ಅಹ್ಮದ್ ಬಾಂಬೆ ಎಂಬಾತನ ವಿರುದ್ಧ ಐಪಿಸಿ ಸೆಕ್ಷನ್ 269, 188 ಮತ್ತು ರಾಷ್ಟ್ರೀಯ ವಿಪತ್ತು ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮರೀನ್ ಡ್ರೈವ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಮೃತ್ಯುಂಜಯ್ ಹೀರೇಮಠ ತಿಳಿಸಿದರು.