ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನ: ಇಂದು ಅಂತ್ಯಕ್ರಿಯೆ

ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನ: ಇಂದು ಅಂತ್ಯಕ್ರಿಯೆ

S.P.   ¦    Sep 26, 2020 09:33:15 AM (IST)
ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನ: ಇಂದು ಅಂತ್ಯಕ್ರಿಯೆ

ಚೆನ್ನೈ: ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.

ತಿರುವಳ್ಳೂರು ಜಿಲ್ಲೆಯ ತಮಾರೈಪಕ್ಕಂ ಗ್ರಾಮದಲ್ಲಿರುವ ಅವರ ಫಾರ್ಮ್ ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಾರ್ವಜನಿಕರಿಗೆ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಕೋಟ್ಯಂತರ ಜನರ ಹೃದಯ ಗೆದಿದ್ದ ಎಸ್‌ಪಿಬಿ ಅವರ ಅಂತ್ಯಸಂಸ್ಕಾರ ವೇಳೆಯಲ್ಲಿ ಪೊಲೀಸ್ ಇಲಾಖೆಯಿಂದ ಗೌರವ ಸಮರ್ಪಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿನ್ನೆ ಮಧ್ಯಾಹ್ನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಎಸ್‌ಪಿಬಿ ಅವರ ಪಾರ್ಥಿವ ಶರೀರವನ್ನು ಚೆನ್ನೈನಲ್ಲಿನ ನಣಗಂಬುಕಂ ನಿವಾಸಕ್ಕೆ ತರಲಾಯಿತು. ತಡರಾತ್ರಿ ಪಾರ್ಥಿವ ಶರೀರವನ್ನು ಫಾರ್ಮ್ ಹೌಸ್ ಗೆ ತರಲಾಯಿತು.

ಕೋವಿಡ್‌ ವಿರುದ್ಧ ಎರಡು ತಿಂಗಳು ಹೋರಾಟ ನಡೆಸಿದ 74 ವರ್ಷದ ಹಿರಿಯ ಗಾಯಕ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ದೇಶದ ಸಂಗೀತ ಲೋಕದ ಕೊಂಡಿಯೊಂದು ಕಳಚಿದಂತಾಗಿದೆ.

ಅವರು ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ 16 ಭಾಷೆಗಳಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಗೀತೆಗಳಿಗೆ ಧ್ವನಿಯಾಗಿದ್ದಾರೆ.