ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ: ನಟ ದುನಿಯಾ ವಿಜಯ್ ವಿರುದ್ಧ ಎಫ್ ಐಆರ್

ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ: ನಟ ದುನಿಯಾ ವಿಜಯ್ ವಿರುದ್ಧ ಎಫ್ ಐಆರ್

HSA   ¦    Jan 23, 2020 06:43:05 PM (IST)
ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ: ನಟ ದುನಿಯಾ ವಿಜಯ್ ವಿರುದ್ಧ ಎಫ್ ಐಆರ್

ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಪೆಂಡಾಲ್ ಹಾಕಿ ಹುಟ್ಟುಹಬ್ಬ ಆಚರಣೆ ಮಾಡಿದ ಆರೋಪದ ಮೇಲೆ ನಟ ದುನಿಯಾ ವಿಜಯ್ ವಿರುದ್ಧ ಗಿರಿನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಜ.19ರಂದು ಗಿರಿನಗರ ಠಾಣೆ ವ್ಯಾಪ್ತಿಗೆ ಸೇರಿರುವ ಬನಶಂಕರಿ 3ನೇ ಹಂತದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಪೆಂಡಾಲ್ ಹಾಕಲಾಗಿತ್ತು ಮತ್ತು ವಿಜಯ್ ಅಪಾಯಕಾರಿ ಆಯುಧ ತಲ್ವಾರ್ ನಿಂದ ಸಾರ್ವಜನಿಕರ ಎದುರೇ ಕೇಕ್ ಕತ್ತರಿಸಿದ್ದರು ಎಂದು ತಡರಾತ್ರಿ ಗಸ್ತಿನಲ್ಲಿದ್ದ ಕಾನ್ ಸ್ಟೇಬಲ್ ಮಧುಸೂದನ್ ಅವರು ನೀಡಿರುವ ದೂರಿನ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ರಸ್ತೆಯಲ್ಲಿ ಪೆಂಡಾಲ್ ಹಾಕಿದ್ದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು ಎಂದು ಕಾನ್ ಸ್ಟೇಬಲ್ ಅವರು ದೂರಿನಲ್ಲಿ ಹೇಳಿರುವರು.