ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ವಿಧಿವಶ

ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ವಿಧಿವಶ

YK   ¦    Apr 06, 2020 05:30:19 AM (IST)
ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ವಿಧಿವಶ

 

ಬೆಂಗಳೂರು: ಬಹುಅಂಗಾಂಗ ವೈಪಲ್ಯದಿಂದ ಬಳಲುತ್ತಿದ್ದ ನಟ ಬುಲೆಟ್ ಪ್ರಕಾಶ್(೪೪) ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸುಮಾರು 325 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಇವರಿಗೆ ಕಲಾಸಿಪಾಳ್ಯ ಚಿತ್ರ ಹೆಸರು ತಂದುಕೊಟ್ಟಿತ್ತು. ಬಹು ಅಂಗಾಂಗ ವೈಪ್ಯಲದಿಂದ ಬಳಲುತ್ತಿದ್ದ ಇವರು ಮಾರ್ಚ್ ೩೧ ರಂದು ಆಸ್ಪತ್ರೆಗೆ ದಾಖಲಾಗಿದ್ದರು. ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬುಲೆಟ್ ಇಂದು ಸಂಜೆ ೪.೪೫ಕ್ಕೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ.