ಪರ್ಲ್ ವಿ ಪುರಿ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು ನೀಡಿದ ವೈದ್ಯಕೀಯ ಪರೀಕ್ಷೆ

ಪರ್ಲ್ ವಿ ಪುರಿ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು ನೀಡಿದ ವೈದ್ಯಕೀಯ ಪರೀಕ್ಷೆ

Ms   ¦    Jun 11, 2021 03:53:59 PM (IST)
ಪರ್ಲ್ ವಿ ಪುರಿ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು ನೀಡಿದ ವೈದ್ಯಕೀಯ ಪರೀಕ್ಷೆ

ಮುಂಬೈ : ಹಿಂದಿ ಕಿರುತೆರೆಯ ಖ್ಯಾತ ನಟ ಪರ್ಲ್ ವಿ ಪುರಿ ವಿರುದ್ಧ ಆರೋಪಿಸಲಾಗಿದ್ದು ಅತ್ಯಾಚಾರ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ಸಿಕ್ಕಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ಸಾಬೀತಾಗಿದೆ ಎಂದು ಸಂತ್ರಸ್ತೆಯ ವಕೀಲರು ಹೇಳಿದ್ದಾರೆ . 

 

ಸಂತ್ರಸ್ತೆಯ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ ಎಂದು ಸಂತ್ರಸ್ತೆಯ ತಂದೆಯನ್ನು ಪ್ರತಿನಿಧಿಸುತ್ತಿರುವ ವಕೀಲರು ಬಹಿರಂಗಪಡಿಸಿದ್ದಾರೆ . ಅಷ್ಟೇ ಅಲ್ಲದೆ, ಸಂತ್ರಸ್ತೆಯ ತಂದೆ ಯಾರನ್ನೂ ಹೆಸರಿಸಿಲ್ಲ . ಆದರೆ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ಪರ್ಲ್ ವಿ ಪುರಿ ಅವರ ಹೆಸರು ಪ್ರಸ್ತಾಪಿಸಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ .

 

ಇನ್ನು ಸಂತ್ರಸ್ತೆಯ ತಂದೆಯ ವಿರುದ್ಧ ಹೇಳಲಾಗಿದ್ದ ಆರೋಪಗಳ ಕುರಿತು ಸ್ಪಷ್ಟನೆ ನೀಡಿರುವ ವಕೀಲರು, ಈ ಪ್ರಕರಣವನ್ನು ತಿರುಚಲು ಪ್ರಯತ್ನಿಸಲಾಗುತ್ತಿದೆ. ಆಕೆಯ ತಂದೆಯ ವಿರುದ್ಧ ವಿನಾಕಾರಣ ವದಂತಿಗಳನ್ನು ಹರಡಲಾಗುತ್ತಿದೆ ಎಂದು ಹೇಳಿದ್ದಾರೆ. 

 

 ಪರ್ಲ್ ವಿ ಪುರಿ ಸೇರಿದಂತೆ ಆರು ಮಂದಿಯನ್ನು ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ .