ಬಾಲಿವುಡ್ ನಟಿ ಐಶ್ವರ್ಯ ರೈ, ಮಗಳು ಆರಾಧ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬಾಲಿವುಡ್ ನಟಿ ಐಶ್ವರ್ಯ ರೈ, ಮಗಳು ಆರಾಧ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

HSA   ¦    Jul 27, 2020 05:03:04 PM (IST)
ಬಾಲಿವುಡ್ ನಟಿ ಐಶ್ವರ್ಯ ರೈ, ಮಗಳು ಆರಾಧ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮುಂಬಯಿ: ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಮತ್ತು ಮಗಳು ಆರಾಧ್ಯ ಅವರು ಮನೆಗೆ ಮರಳಿದ್ದಾರೆ.

ಕೆಲವು ದಿನಗಳ ಮೊದಲು ಅವರು ಉಸಿರಾಟದ ತೊಂದರೆಯಿಂದಾಗಿ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು.

ಈಗ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿರುವ ಕಾರಣದಿಂದ ಅವರು ಮನೆಗೆ ಮರಳಿರುವರು. ಆದರೆ ಅಭಿಷೇಕ್ ಬಚ್ಚನ್ ಮತ್ತು ಅಮಿತಾಬ್ ಬಚ್ಚನ್ ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಐಶ್ವರ್ಯ ಮತ್ತು ಆರಾಧ್ಯಾಗೆ ಜುಲೈ 12ರಂದು ಕೊರೋನಾ ದೃಢಪಟ್ಟಿತ್ತು. ಇದರ ಬಳಿಕ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದ ಅವರಿಗೆ ಜುಲೈ 17ರಂದು ಉಸಿರಾಟದ ಸಮಸ್ಯೆ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದರು.