ನಟ ಸಾಧು ಕೋಕಿಲ, ಮಂಡ್ಯ ರಮೇಶ್ ವಿರುದ್ಧದ ವಿಚಾರಣೆಗೆ ಕೋರ್ಟ್ ಮಧ್ಯಂತರ ತಡೆ

ನಟ ಸಾಧು ಕೋಕಿಲ, ಮಂಡ್ಯ ರಮೇಶ್ ವಿರುದ್ಧದ ವಿಚಾರಣೆಗೆ ಕೋರ್ಟ್ ಮಧ್ಯಂತರ ತಡೆ

YK   ¦    Dec 10, 2019 03:39:32 PM (IST)
 ನಟ ಸಾಧು ಕೋಕಿಲ, ಮಂಡ್ಯ ರಮೇಶ್ ವಿರುದ್ಧದ ವಿಚಾರಣೆಗೆ ಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ಕನ್ನಡ ಚಿತ್ರನಟ ಸಾಧುಕೋಕಿಲ ಮತ್ತು ಮಂಡ್ಯ ರಮೇಶ್ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಮೈಸೂರಿನ ಮಸಾಜ್ ಸಲೂನ್ ನ ಮಹಿಳಾ ಸಿಬ್ಬಂದಿಯೊಬ್ಬರ ಘನತೆಗೆ ಧಕ್ಕೆ ತಂದ ಆರೋಪದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಸಾಧು ಕೋಕಿಲ ಮತ್ತು ಮಂಡ್ಯ ರಮೇಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ಮಾಡಿತು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ ‘ಯಾವುದೇ ಸಾಕ್ಷ್ಯಧಾರಗಳು ಇಲ್ಲದೆ ಇರುವುದರಿಂದ ವಿಚಾರಣೆ’ ರದ್ದುಗೊಳಿಸಬೇಕೆಂದು ಕೋರಿದರು. ಇದನ್ನು ಮಾನ್ಯ ಮಾಡಿದ ಪೀಠ ವಿಚಾರಣೆಗೆ ಮಧ್ಯಂತರ ತಡೆ ಆದೇಶ ನೀಡಿದೆ.